

ಮಡಿಕೇರಿ: ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಏ.೧೫ ರಂದು ವಿಶ್ವಚಿತ್ರ ಕಲಾ ದಿನಾಚರಣೆ ಸಂದರ್ಭ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಎಚ್.ಟಿ.ಅನಿಲ್ ತಿಳಿಸಿದ್ದಾರೆ.
ಮಡಿಕೇರಿ ರಾಜಾಸೀಟ್‌ನಲ್ಲಿ ಏ.೧೫ ರಂದು ಶನಿವಾರ ಬೆಳಗ್ಗೆ ೧೦ ಗಂಟೆಯಿಂದ ಚಿತ್ರಕಲಾ ಸ್ಪರ್ಧೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ವಿಭಾಗದಲ್ಲಿ ಆಯೋಜಿಸಲ್ಪಟ್ಟಿದೆ. ವಿಶ್ವಚಿತ್ರಕಲಾ ದಿನದ ಅಂಗವಾಗಿ ಜಿಲ್ಲೆಯ ಚಿತ್ರಕಲಾವಿದರು ಕೂಡ ವೈವಿಧ್ಯಮಯ ಚಿತ್ರಕಲೆ ರಚಿಸಲಿದ್ದಾರೆ.
ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯುವ ಚಿತ್ರಕಲಾ ಸ್ಪರ್ಧೆಯಲ್ಲಿ ಮತದಾನದ ಮಹತ್ವದ ವಿಷಯದಲ್ಲಿ ಚಿತ್ರಕಲೆ ರಚಿಸಬಹುದಾಗಿದೆ. ಪ್ರೌಢಶಾಲಾ ಮತ್ತು ಕಾಲೇಜು ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿತವಾಗಿದ್ದರೆ ಸಾರ್ವಜನಿಕರಿಗೆ ಮುಕ್ತವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲ್ಪಟ್ಟಿದೆ. ಚಿತ್ರಕಲೆಗೆ ಅಗತ್ಯ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು ಎಂದು ತಿಳಿಸಿದ್ದಾರೆ.
ಇದೇ ಸಂದರ್ಭ ನಾನು ಮತದಾನ ಮಾಡುತ್ತೇನೆ ಎಂಬ ಬಹತ್ ಕ್ಯಾನ್ವಸ್‌ನ್ನು ರಾಜಾಸೀಟ್‌ನಲ್ಲಿ ಕಲಾವಿದರು ರಚಿಸಲಿದ್ದು, ಸಾರ್ವಜನಿಕರು ಕೂಡ ಕ್ಯಾನ್ವಸ್‌ನಲ್ಲಿ ತಮ್ಮ ಸಂದೇಶ ಸಾರಲು ಅವಕಾಶ ನೀಡಲಾಗಿದೆ. ಚಿತ್ರಕಲಾ ಸ್ಪಧೆರ್೯ಯಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳು, ಸಾರ್ವಜನಿಕರು ಸ್ಪರ್ಧೆ ಜರುಗುವ ರಾಜಾಸೀಟ್‌ಗೆ ಏ.೧೫ ರಂದು ಬೆಳಗ್ಗೆ ೧೦ ಗಂಟೆಯೊಳಗೆ ಬಂದು ಸ್ಥಳದಲ್ಲಿಯೇ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ೯೮೪೪೦೬೦೧೭೪ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.