ಫೆ.3ರಿಂದ ಪಜಿರಡ್ಕ ಸದಾಶಿವೇಶ್ವರ ಕ್ಷೇತ್ರ ಜಾತ್ರೆ

Bel_Pajiradka
Published on

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪ್ರತಿಷ್ಠಾಪನಾ ದಿನಾಚರಣೆ, ವಾರ್ಷಿಕ ಜಾತ್ರೆ ಹಾಗೂ ರಥೋತ್ಸವ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಫೆ.3ರಿಂದ 5ರವರೆಗೆ ನಡೆಯಲಿದೆ.

3ರಂದು ಗಣಪತಿ ಹೋಮ, ತೋರಣ ಮುಹೂರ್ತ, ಹೊರೆ ಕಾಣಿಕೆ ಸಮರ್ಪಣೆ, ಉಗ್ರಾಣ ಮಹೂರ್ತ, ಶತರುದ್ರಾಭಿಷೇಕ, ವಾಸ್ತು ರಾಕ್ಷೋಘ್ನ ಹೋಮ. 4ರಂದು ಗಣಪತಿ ಹೋಮ, ತ್ರಿಕಾಲ ಪೂಜೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ತ್ರಿಕಾಲ ಪೂಜೆ ಮಂಗಳ, ದೇವರ ಬಲಿ ಉತ್ಸವ, ಪಾಲಕ್ಕಿ ಬಲಿ, ಪುಷ್ಪರಥೋತ್ಸವ, ಕಟ್ಟೆ ಪೂಜೆ, ವಸಂತ ಕಟ್ಟೆ ಪೂಜೆ, ಪ್ರಸಾದ ವಿತರಣೆ, 5ರಂದು ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ವಿತರಣೆ, ಆಶ್ಲೇಷ ಬಲಿ ಕಲಶಾಭಿಷೇಕ, ಮಹಾಪೂಜೆ, ಸಂಜೆ ಭಂಡಾರ ಹೊರಡುವುದು ಹಾಗೂ ರಾತ್ರಿ ದೈವಗಳಿಗೆ ನೇಮೋತ್ಸವ ನಡೆಯಲಿದೆ.

3ರಂದು ಬಾಲಗೋಕುಲ ಮತ್ತು ಶಾಲಾ ವಿದ್ಯಾರ್ಥಿಗಳು ಹಾಗೂ ಊರವರಿಂದ ಸಾಂಸ್ಕೃತಿಕ ಕಾರ್ಯಕ್ರಮ, 4ರಂದು ರಾತ್ರಿ 10ರಿಂದ ದೇವದಾಸ್ ಕಾಪಿಕಾಡ್ ತಂಡದ ‘ಏರ್ಲಾ ಗ್ಯಾರಂಟಿ ಅತ್ತ್’ ನಾಟಕ, 5ರಂದು ಸಂಜೆ 7ರಿಂದ ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯ ಯಕ್ಷಗಾನ ತರಬೇತಿ ಕೇಂದ್ರದ ಮಕ್ಕಳಿಂದ ಮಹಿಷಮರ್ದಿನಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಪುಷ್ಪರಥ ಸಮರ್ಪಣೆ

ಶ್ರೀ ದೇವರಿಗೆ ಸುಕನ್ಯಾ ಮತ್ತು ಜಯರಾಮ ರಾವ್ ಹಾಗೂ ಮಕ್ಕಳ ವತಿಯಿಂದ ನೂತನ ಪುಷ್ಪ್ಪರಥ ಸಮರ್ಪಣೆ 3ರಂದು ನಡೆಯಲಿದೆ. ಬೆಳಗ್ಗೆ 10ಕ್ಕೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಿಂದ ಪಜಿರಡ್ಕ ದೇವಸ್ಥಾನದವರೆಗೆ ರಥದ ಭವ್ಯ ಶೋಭಾಯಾತ್ರೆ, ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ಆಡಳಿತಾಧಿಕಾರಿ ನಾಗಶಯನ ರಾವ್ ಅಧ್ಯಕ್ಷತೆ ವಹಿಸುವರು. ಉದ್ಯಮಿ ಕೆ.ಮೋಹನ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net