

ಬೆಳಗಾವಿ: ಪಾಕ್ ಆಕ್ರಮಿತ ಕಾಶ್ಮೀರ ವಶಪಡಿಸಿಕೊಳ್ಳುವುದು ಬಿಜೆಪಿಯ ರಾಜಕೀಯ ಅಜೆಂಡಾ ಆಗಿದ್ದು, ಆ ವಿಷಯ ಬಗ್ಗೆ ಪದೇ ಪದೆ ಮಾತನಾಡು ತ್ತಿದ್ದಾರೆ. ಯಾವ ರೀತಿಯ ಕ್ರಮ ಕೈಗೊಳ್ಳು ತ್ತಾರೆ ಕಾದು ನೋಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಭಾರತೀಯರ ಮೇಲೆ ಉಗ್ರರ ದಾಳಿ ಹಿನ್ನೆಲೆ ಪಾಕಿಸ್ತಾನದ ಮೇಲೆ ಪೂರ್ಣ ಪ್ರಮಾಣದ ಯುದ್ಧ ನಡೆಯುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಅದು ಹುಸಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಯಾರು? ಸೂಚನೆ ನೀಡಿದ್ದರು ಎನ್ನುವುದು ಒಂದಿಲ್ಲ ಒಂದು ದಿನ ಬಹಿರಂಗವಾಗುತ್ತದೆ. ಅಲ್ಲಿಯವರೆಗೆ ಕಾಯಬೇಕು. ಸರ್ಕಾರದ ನಿರ್ಧಾರಕ್ಕೆ ನಾವೆಲ್ಲ ಗಟ್ಟಿ ಬೆಂಬಲ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುವುದು ಮುಖ್ಯವಾಗಿದೆ ಎಂದರು.
ಈಗಾಗಲೇ ನಮ್ಮ ಪಕ್ಷದ ವರಿಷ್ಠರು ಸಂಸತ್ತಿನ ಅವೇಶನ ಕರೆದು ಸಮಗ್ರ ವಿಷಯ ಕುರಿತು ಚರ್ಚಿಸಲು ಹಾಗೂ ಸರ್ಕಾರದ ನಿರ್ಣಯಗಳನ್ನು ಜನರಿಗೆ ತಿಳಿಸುವಂತೆ ಆಗ್ರಹಿಸಿದ್ದಾರೆ. ಯುದ್ಧ ನಡೆಸಬೇಕಾ? ಅಥವಾ ಬಿಡಬೇಕಾ? ಎಂಬುವುದು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತವೆ. ಪಾಕಿಸ್ತಾನ ವಿಷಯದಲ್ಲಿ ಕೇಂದ್ರ ಸರ್ಕಾರ ಗಟ್ಟಿ ನಿರ್ಧಾರ ಕೈಗೊಳ್ಳುತ್ತದೆಯಾ? ಎಂಬುವುದು ಮುಖ್ಯವಾಗಿದೆ ಎಂದು ಹೇಳಿದರು. ಸಾಮಾಜಿಕ ಜಾಲತಾಣಗಳಲ್ಲಿ ಇಂದಿರಾ ಗಾಂ ಪ್ರಧಾನಿಯಾಗಿದ್ದಾಗ ಪಾಕಿಸ್ತಾನ ವಿರುದ್ಧ ತೆಗೆದುಕೊಂಡ ನಿರ್ಧಾರ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿರುವ ಕುರಿತು ಮಾತನಾಡಿದ ಸಚಿವರು, ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ತಪ್ಪುಗಳು ಒಂದಿಲ್ಲ ಒಂದು ದಿನ ಹೊರಗೆ ಬರಬೇಕು. ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಶಾಸಕ ವಿಶ್ವಾಸ ವೈದ್ಯ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಇತರರಿದ್ದರು.