ತಮಿಳುನಾಡಿನ ಪಳನಿ ಟಸ್ಕರ್ಸ್ ಚಾಂಪಿಯನ್

sports
Published on

ಉತ್ತಮ ಪ್ರದರ್ಶನ ನೀಡಿದ ತಮಿಳುನಾಡಿನ ಪಳನಿ ಟಸ್ಕರ್ಸ್ ತಂಡ ಯುವ ಕಬಡ್ಡಿ ಸರಣಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.


ಪ್ರೊ.ಕಬಡ್ಡಿ ಮಾದರಿಯಲ್ಲಿ ನಗರದ ಚಾಮುಂಡಿವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಾಜಸ್ಥಾನದ ಪೆರಿಯಾರ್ ಪ್ಯಾಂಥರ್ಸ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿತು. ಚಾಂಪಿಯನ್ ತಂಡಕ್ಕೆ 20 ಲಕ್ಷ ರೂ.ನಗದು ಬಹುಮಾನ ನೀಡಲಾಯಿತು.

ದ್ವಿತೀಯ ಸ್ಥಾನ ಪಡೆದ ಪೆರಿಯಾರ್ ಪ್ಯಾಂಥರ್ಸ್ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಂತಿಮ ಪಂದ್ಯ ವೀಕ್ಷಿಸುವ ಜತೆಗೆ ವಿಜೇತ ಪಳನಿ ಟಸ್ಕರ್ಸ್ ತಂಡಕ್ಕೆ ಬಹುಮಾನ ವಿತರಿಸಿದರು.

ಜೂನ್ 19ರಂದು ಆರಂಭಗೊಂಡಿದ್ದ ಪಂದ್ಯಾವಳಿಯಲ್ಲಿ ರಾಜಸ್ಥಾನದ ಅರವಾಳಿ ಆರೋವ್ಸ್, ಪೆರಿಯಾರ್ ಪ್ಯಾಂಥರ್ಸ್, ಪಾಂಡಿಚೇರಿಯ ಚೋಳ ವೀರನ್ಸ್, ಅಸ್ಸಾಂ, ಮಣಿಪುರ ಮತ್ತು ತ್ರಿಪುರ ರಾಜ್ಯಗಳ ಕಾಜಿರಂಗ ರೈನೋಸ್, ತಮಿಳುನಾಡಿನ ಪಳನಿ ಟಸ್ಕರ್ಸ್, ಜಾರ್ಖಂಡ್‌ನ ಸಿಂಧ್ ಸೋನಿಕ್ಸ್, ಕರ್ನಾಟಕದ ಹಂಪಿ ಹೀರೋಸ್, ಛತ್ತೀಸ್‌ಗಡದ ಚಂಬಲ್ ಚಾಲೆಂಜರ್ಸ್, ತಮಿಳುನಾಡಿನ ನೀಲಗಿರಿ ನೈಟ್ಸ್ ತಂಡಗಳು ಭಾಗವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net