

ಮಡಿಕೇರಿ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಅಹವಾಲು ಆಲಿಸಿ, ಮನವಿ ಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುಡಿಯರ ಮುತ್ತಪ್ಪ ಕೊಡಗು ಜಿಲ್ಲೆಯಲ್ಲಿ ಕುಡಿಯ ಜನಾಂಗಕ್ಕೆ 5 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಸ್ವಾತಂತ್ರö್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಆದ್ದರಿಂದ ಕುಡಿಯ ಸಮುದಾಯವನ್ನು ಅಲೆಮಾರಿಗಳೆಂದು ಹೇಳದೆ ಆದಿವಾಸಿಗಳ ಪಟ್ಟಿಗೆ ಸೇರಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ನಿಗಮದ ವಿಶೇಷ ಕರ್ತವ್ಯಾಧಿಕಾರಿ ಆನಂದ್ ಕುಮಾರ್ ಸೂಕ್ಷö್ಮ, ಸಣ್ಣ ಸಣ್ಣ ಸಮುದಾಯಗಳನ್ನು ಅಲೆಮಾರಿಗಳೆಂದು ಗುರುತಿಸಲಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಕೆ.ಕೆ.ದೇವಪ್ಪ ಅವರು ಮಾತನಾಡಿ ಅಜಿಲ-ನಲಿಕೆ ಸಮಾಜವು ಸಂಪಾಜೆ, ಚೆಂಬು, ಜೋಡುಪಾಲ, ವಿರಾಜಪೇಟೆ ವ್ಯಾಪ್ತಿಯಲ್ಲಿ ಬರಲಿದ್ದು, ಸಣ್ಣ ಸಮುದಾಯವಾಗಿದೆ. ಈ ಸಮುದಾಯಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿಯ ಸದಸ್ಯ ಎಚ್.ಎಸ್.ಮುತ್ತಪ್ಪ ಮನವಿ ಮಾಡಿ ಜಿಲ್ಲೆಯಲ್ಲಿ ಪಾಲೆ ಮತ್ತು ಮೊಗೇರ ಸಮಾಜದವರು ಹಲವು ವರ್ಷಗಳಿಂದ ವಾಸ ಮಾಡುತ್ತಿದ್ದು, ಪಾಲೆ ಸಮಾಜದವರಿಗೆ ಪಾಲೆ ಸಮಾಜದವರು ಮತ್ತು ಮೊಗೇರ ಸಮಾಜದವರಿಗೆ ಮೊಗೇರ ಎಂದು ಜಾತಿ ಪ್ರಮಾಣ ಪತ್ರ ನೀಡಬೇಕು ಎಂದರು.
ಕುಶಾಲನಗರದ ಸುಂದರನಗರದಲ್ಲಿ ಜೇನುಕುರುಬ ಸಮಾಜದವರು ಹಲವು ದಶಕಗಳಿಂದ ವಾಸ ಮಾಡುತ್ತಿದ್ದು, ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು.
ಅಹವಾಲು ಆಲಿಸಿ ಮಾತನಾಡಿದ ಜಿ. ಪಲ್ಲವಿ ಕೊಡಗು ಜಿಲ್ಲೆಗೆ ಮತ್ತೆ ಭೇಟಿ ನೀಡಲಾಗುವುದು. ಭೂ ಪ್ರದೇಶ ವಿಶಾಲವಾಗಿದ್ದು, ಇನ್ನೂ ಹೆಚ್ಚಿನ ಹಾಡಿಗಳಿಗೆ ಭೇಟಿ ನೀಡಿ ಶಿಕ್ಷಣ, ಆರೋಗ್ಯಕ್ಕೆ ಸಂಬAಧಿಸಿದAತೆ ಮಾಹಿತಿ ಪಡೆಯಲಾಗುವುದು. ಈಗಾಗಲೇ ರಾಜ್ಯದ 17 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಅಲೆಮಾರಿ ಸಮಾಜಗಳಿಗೆ ಆದಷ್ಟು ಸರ್ಕಾರದ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಸೂಕ್ಷö್ಮ, ಸಣ್ಣ ಸಣ್ಣ ಸಮಾಜಗಳನ್ನು ಗುರುತಿಸಿ ಅವರ ಕುಂದುಕೊರತೆಗಳನ್ನು ಆಲಿಸಲು ಖುದ್ದು ಭೇಟಿ ನೀಡಲಾಗುತ್ತದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಬಾಲಕೃಷ್ಣ ರೈ, ಸಿದ್ದೇಗೌಡ, ಪ್ರೀತಿ ಚಿಕ್ಕಮಾದಯ್ಯ, ತೇಜಕುಮಾರ ಇತರರು ಇದ್ದರು.