

ಕೆ.ಆರ್.ನಗರ: ಪಟ್ಟಣದ ಪುರಸಭೆ ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ 1ನೇ ವಾರ್ಡ್‌ನ ಸದಸ್ಯೆ ಪಲ್ಲವಿ ಆನಂದ್ ಅವಿರೋಧವಾಗಿ ಆಯ್ಕೆಯಾದರು.
ವಸಂತಮ್ಮ ಕೃಷ್ಣೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಪುರಸಭೆಯ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಲ್ಲವಿ ಆನಂದ್ ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿ ಅವಿರೋಧ ಆಯ್ಕೆ ಪ್ರಕಟಿಸಿದರು.
ಚುನಾವಣಾ ಸಭೆಯಲ್ಲಿ ಅಧ್ಯಕ್ಷ ಶಿವುನಾಯಕ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್, ಸದಸ್ಯರಾದ ಪ್ರಕಾಶ್, ಸೈಯದ್ ಸಿದ್ದಿಕ್, ಕೆ.ಜಿ.ಸುಬ್ರಹ್ಮಣ್ಯ, ಕೆ.ಎಲ್.ಜಗದೀಶ್, ಉಮೇಶ್, ನಟರಾಜು, ಕೆ.ಬಿ.ವೀಣಾ ವೃಷಭೇಂದ್ರ, ಅಶ್ವಿನಿ ಪುಟ್ಟರಾಜು, ಶಂಕರ್‌ಸ್ವಾಮಿ, ತೋಂಟದಾರ್ಯ, ಮುಖ್ಯಾಧಿಕಾರಿ ಬಿ.ವಿ.ವೆಂಕಟೇಶ್ ಭಾಗವಹಿಸಿದ್ದರು.
ಪಲ್ಲವಿ ಆನಂದ್ ಮಾತನಾಡಿ, ಪಕ್ಷದ ವರಿಷ್ಠರು ನನಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರಲ್ಲದೆ, ಶಾಸಕ ಡಿ.ರವಿಶಂಕರ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ದೊಡ್ಡಸ್ವಾಮೇಗೌಡ, ಪುರಸಭೆಯ ಸರ್ವ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಿದರು.
ಉಪಾಧ್ಯಕ್ಷೆ ಪಲ್ಲವಿ ಆನಂದ್ ಅವರನ್ನು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ನಿರ್ದೇಶಕ ಕೆ.ಎ.ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಎಂ.ಎಸ್.ಮಹದೇವ್, ವಕ್ತಾರ ಸೈಯದ್ ಜಾಬೀರ್, ಕಾಂಗ್ರೆಸ್ ಮುಖಂಡರಾದ ಮಧುವನಹಳ್ಳಿ ಆದರ್ಶ, ಕಾಮಧೇನು ಧರ್ಮರಾಜು, ಜಗದೀಶ್, ಮಧುವನಹಳ್ಳಿ ಆನಂದ, ಕುಮಾರ್, ಮನು, ಕಾರ್ತಿಕ್, ಶಾಮಿಯಾನ ಕಿರಣ್, ಟಿಎಪಿಸಿಎಂಎಸ್ ಮಾಜಿ ಮಾಜಿ ನಿರ್ದೇಶಕ ಡಿ.ಸಿ.ರವಿ ಅಭಿನಂದಿಸಿದರು.