ಕೆ.ಎನ್.ರಾಜಣ್ಣಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಕರಪತ್ರ ಚಳವಳಿ

22 SARAG 1
ಸರಗೂರು ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕು ನಾಯಕ ಸಮಾಜದವರಿಗೆ ಕರಪತ್ರ ನೀಡಿದರು.
Published on

 ಸರಗೂರು : ಮಾಜಿ ಸಚಿವ ಕೆೆ.ಎನ್. ರಾಜಣ್ಣ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವವರೆಗೂ ನಿರಂತರವಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.

ಪಟ್ಟಣದಲ್ಲಿ ಪ್ರವಾಸಿ ಮಂದಿರದಲ್ಲಿ ಗುರುವಾರ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಸಮಿತಿ ನೇತೃತ್ವದಲ್ಲಿ ಸಭೆ ನಡೆಸಿ, ಬಳಿಕ ಕರಪತ್ರ ನಂತರ ಮಾತನಾಡಿದರು.

ರಾಜಣ್ಣ ಹಾಗೂ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿರವುದನ್ನು ಖಂಡಿಸಿ ಆ. 29 ರಂದು ಮೈಸೂರು ಮತ್ತು ಚಾಮರಾಜನಗರ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ ನಮ್ಮ ಸಮಾಜದ ಬಂಧುಗಳಿಗೆ ಆಹ್ವಾನ ಪತ್ರಿಕೆ ನೀಡಿ ಈ ಬೃಹತ್ ಪತ್ರಿಭಟನೆಗೆ ತಾಲೂಕಿನ ಎಲ್ಲ ಗ್ರಾಮಗಳಿಗೆ ಕರಪತ್ರ ಹಂಚಿ ಹೆಚ್ಚಿನ ಜನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಮೈಸೂರಿನ ಟೌನ್ ಹಾಲ್ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಪ್ರತಿಭಟನೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ನಾಯಕ ಸಮಾಜದ ಮುಖಂಡರು ಭಾಗವಹಿಸುತ್ತಿದ್ದಾರೆ. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.

ಜಿಲ್ಲಾ ಸಮಿತಿ ಉಪಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಕೆಂಪನಾಯಕ ,ಅಣ್ಣಯ್ಯ ನಾಯಕ, ಶ್ರೀ ಮಹರ್ಷಿ ವಾಲ್ಮೀಕಿ ಗುರುಕುಲ ಸೇವಾ ಟ್ರಸ್ಟ್ ನ ಅಧ್ಯಕ್ಷ ಶ್ರೀನಿವಾಸನಾಯಕ, ಪ್ರಧಾನ ಕಾರ್ಯದರ್ಶಿ ದ್ಯಾವಪ್ಪನಾಯಕ, ಸಹ ಕಾರ್ಯದರ್ಶಿ ಪ್ರಭಾಕರ ಹುಣಸೂರು, ಮೈಸೂರು ತಾಲೂಕು ಅಧ್ಯಕ್ಷ ಮಹಾದೇವ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಡಕೊಳ ಕುಮಾರಸ್ವಾಮಿ, ನಾಯಕರ ವಿಧ್ಯಾಭಿವೃಧ್ಧಿ ಸಂಘದ ಅಧ್ಯಕ್ಷ ಮಹಾದೇವ ನಾಯಕ, ವಿನೋದ್,ಸುರೇಶ್, ಪಪಂ ಸದಸ್ಯ ಶ್ರೀನಿವಾಸ, ತಾಲೂಕು ನಾಯಕ ಸಮಾಜದ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಯಜಮಾನರು ಬೆಟ್ಟನಾಯಕ, ಕೆಇಬಿ ಶಿವಣ್ಣ,ಮುಖಂಡರು ಶಂಭುಲಿಂಗನಾಯಕ, ನವೀನ್ ಕುಮಾರ್, ಚನ್ನಪ್ಪನಾಯಕ, ನಾಗಣ್ಣ, ರವಿಕುಮಾರ್, ರಮೇಶ್ ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net