ಸಮ್ಮೇಳನ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ

13blk1
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ರಾಜ್ಯಮಟ್ಟದ ೫ನೇ ವಚನ ಸಾಹಿತ್ಯ ಸಮ್ಮೇಳನದ ಕರಪತ್ರವನ್ನು ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಬಿಡುಗಡೆಗೊಳಿಸಿದರು. ಶ್ರೀ ಮಹಾಲಿಂಗ ಸ್ವಾಮೀಜಿ, ಸುನೀತಾ ಗೌಡರ, ಪುಣ್ಯವತಿ ವಿಸಾಜಿ, ಶಂಭುಲಿಂಗ ಕಾಮಣ್ಣ, ಗುಂಡಪ್ಪ ಸಂಗಮಕರ, ಸಂತೋಷ ಹಡಪದ ಇದ್ದರು.
Published on

ಭಾಲ್ಕಿ: ಬೀದರ್‌ನಲ್ಲಿ ಅ.೨೮ರಂದು ನಡೆಯಲಿರುವ ರಾಜ್ಯಮಟ್ಟದ ೫ನೇ ವಚನ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್​ ಅಧ್ಯಕ್ಷರಾದ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಕರ್ನಾಟಕ ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ೫ನೇ ವಚನ ಸಾಹಿತ್ಯ ಸಮ್ಮೇಳನದ ಕರಪತ್ರ ಬಿಡುಗಡೆ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಕರ್ನಾಟಕ ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಸಹಯೋಗದಲ್ಲಿ ಅಂದು ಡಾ.ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ ಆಯೋಜಿಸಿರುವುದು ಸಂತಸ ತರಿಸಿದೆ. ನಾಡಿನ ಮಠಾಧೀಶರು, ಸಾಹಿತಿಗಳು, ಚಿಂತಕರು, ಜನಪ್ರತಿನಿಧಿಗಳು, ಗಣ್ಯರು, ಕಲಾವಿದರು ಭಾಗವಹಿಸಲಿದ್ದು, ಜಿಲ್ಲೆಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಸುನಿತಾ ಗೌಡರ್(ದಾಡಗೆ) ಮಾತನಾದರು.

ಶ್ರೀ ಮಹಾಲಿಂಗ ಸ್ವಾಮೀಜಿ, ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಉಪಾಧ್ಯಕ್ಷೆ ಪುಣ್ಯವತಿ ವಿಸಾಜಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ಪ್ರಮುಖರಾದ ಗುಂಡಪ್ಪ ಸಂಗಮಕರ, ಸಂತೋಷ ಹಡಪದ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net