

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಅಸಹಾಯಕ ದುರ್ಬಲ ವರ್ಗದವರಿಂದ ಹಿಡಿದು ಎಲ್ಲ ವರ್ಗದವರಿಗೂ ಅನುಕೂಲವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷ ಎಂ.ಸಿ.ಶಿವನAದಸ್ವಾಮಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಸಮಿತಿಯ ಎರಡನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಚಿತ ಆಹಾರ ಧಾನ್ಯ ವಿತರಣೆಯಲ್ಲಿ ರಾಜ್ಯದಲ್ಲೇ ಚಿಕ್ಕಮಗಳೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಶೇ ೯೭.೨೬ ರಷ್ಟು ಸಾಧಿಸಿದೆ. ಇದುವರಿಗೂ ಜಿಲ್ಲೆಗೆ ೧೫೨.೭೮ ಕೋಟಿ ರೂ. ಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ. ಪಡಿತರ ವಿತರಣಾ ವ್ಯವಸ್ಥೆ ಸಂಪೂರ್ಣವಾಗಿ ಗಣಕೀಕರಣದಡಿ ಪಡಿತರ ಚೀಟಿದಾರರ ಜೊತೆಗೆ ಪ್ರತಿ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿ ಬ್ಯಾಂಕ್ ಖಾತೆಯ ಮುಖಾಂತರ ಹಣ ನೀಡಲಾಗಿದೆ ಎಂದು ಹೇಳಿದರು.
ಮಹಿಳಾ ಸಬಲೀಕರಣಕ್ಕೆ ಉಚಿತ ಬಸ್ ಸೌಲಭ್ಯ ಕಲ್ಪಿಸುವ ಯೋಜನೆಯ ಸೌಲಭ್ಯವನ್ನು ಕೋಟ್ಯಂತರ ಮಹಿಳೆಯರು ಪಡೆಯುತ್ತಿದ್ದಾರೆ. ಎಲ್ಲ ವರ್ಗದ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ನಿಗಧಿತ ವಿದ್ಯುತ್ ಸೌಲಭ್ಯ ನೀಡುವುದರ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಮಹತ್ವ ನೀಡಿದೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರು ಹಣಕಾಸು ವಿಚಾರದಲ್ಲಿ ಸ್ವಾಲಂಬಿಗಳಾಗಲಿ ಎಂಬ ಸುದುz್ದೆÃಶದಿಂದ ಜಾರಿಗೊಳಿಸಲಾಗಿದೆ. ಈ ಯೋಜನೆ ಜಿಲ್ಲೆಯಲ್ಲಿ ನೋಂದಾಯಿಸಿದ ಫಲಾನುಭವಿಗಳಲ್ಲಿ ಶೇ ೯೪.೮೧ರಷ್ಟು ಪ್ರಗತಿ ಸಾಧಿಸಿದೆ ಎಂದರು.
ಯುವ ಸಮುದಾಯವನ್ನು ಮುಖ್ಯ ವಾಹಿನಿಗೆ ತರಲು ಅವರಿಗೆ ಯುವ ನಿಧಿ ಯೋಜನೆಯ ಮೂಲಕ ಇದುವರೆಗೂ ೩,೮೧೨ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಪ್ರತಿ ಗ್ರಾಮಗಳಲ್ಲಿ ಅರ್ಹ ಫಲಾನುಭವಿಗಳಿದ್ದು, ಅನುಷ್ಠಾನ ಸಮಿತಿಯ ಎಲ್ಲ ಸದಸ್ಯರು ಮತ್ತು ಸಂಬAಧಿಸಿದ ಅಧಿಕಾರಿಗಳು ಸಮನ್ವಯತೆಯಿಂದ ಫಲಾನುಭವಿಗಳನ್ನು ಗುರುತಿಸಿ ಅರ್ಹರಿಗೆ ಯೋಜನೆಗಳ ಪ್ರಯೋಜನವನ್ನು ನೀಡಲು ಮುಂದಾಗಬೇಕು ಎಂದು ಹೇಳಿದರು.
ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಮಾತನಾಡಿ, ಅನುಷ್ಠಾನ ಸಮಿತಿ ಸದಸ್ಯರುಗಳು ಕೇಳಲಾದ ವಿವಿಧ ಸಮಸ್ಯೆಗಳಿಗೆ ಸಂಬAಧಪಟ್ಟ ಇಲಾಖೆಯ ವಿವಿಧ ಅಧಿಕಾರಿಗಳಿಂದ ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲ ತಾಲೂಕು ಸಮಿತಿಗಳು ಕ್ರಿಯಾಶೀಲರಾಗಿ ಯೋಜನೆಗಳ ಮಾಹಿತಿ ಪಡೆದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಹಾಗೂ ಇರುವ ತಾಂತ್ರಿಕ ಸಮಸ್ಯೆಗಳನ್ನು ಕೇಂದ್ರ ಸಮಿತಿಯ ಸಭೆಯ ಗಮನಕ್ಕೆ ತರುವ ಪ್ರಯತ್ನ ಮಾಡಲಾಗುತ್ತದೆ. ಹಂತ ಹಂತವಾಗಿ ಇರುವ ಕೆಲವು ಸಮಸ್ಯೆಗಳನ್ನು ನಿವಾರಿಸಲು ಸಂಬAಧಪಟ್ಟ ಅಧಿಕಾರಿಗಳು ಜೊತೆ ಚರ್ಚಿಸಿ ಬಗೆಹರಿಸಲಾಗುವುದು ಎಂದರು.
ಸಮಿತಿಉಪಾಧ್ಯಕ್ಷರಾದ ಎಚ್.ಎಸ್.ಕೃಷ್ಣೇಗೌಡ, ಚಂದ್ರವಳ್ಳಿ ಮಲ್ಲೇಶ್, ರತ್ನಕರ, ಮಹಮದ್, ಚಂದ್ರು, ಹೇಮವತಿ ಮಂಜಣ್ಣ ಮತ್ತಿತರರಿದ್ದರು.