

ಸಂಕೇಶ್ವರ: ಪಂಚ ಯೋಜನೆಗಳಿಂದ ಅಭಿವೃದ್ಧಿ ಕುಂಠಿತಗೊಂಡಿದ್ದು, ಸಾರ್ವಜನಿಕ ತೆರಿಗೆ ದುರುಪಯೋಗವಾಗುತ್ತಿದೆ ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು.
ಸಮೀಪದ ಕಮತನೂರ, ಬಾಡವಾಡಿ, ಕೋಣನಕೇರಿ, ಶಿಪ್ಪುರ ಗ್ರಾಮ ಸೇರಿ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು. ರಾಜಕೀಯ ಪಕ್ಷಗಳು ಕರ್ನಾಟಕ ಸೇರಿ ಇತರೆ ರಾಜ್ಯಗಳಲ್ಲಿ ವೋಟ್ ಬ್ಯಾಂಕ್ ಸಲುವಾಗಿ ರೂಪಿಸುತ್ತಿರುವ ಯೋಜನೆಗಳು ಅಭಿವೃದ್ಧಿಗೆ ಮಾರಕವಾಗಿವೆ. ದೇಶದ ಭವಿಷ್ಯಕ್ಕಾಗಿ ಉಚಿತ ಯೋಜನೆ ಕೈಬಿಡುವ ಮೂಲಕ ಅಭಿವೃದ್ಧಿಗೆ ಮುಂದಾಗಬೇಕು. ಬಡತನ ನಿರ್ಮೂಲನೆಗಾಗಿ ಶಿಕ್ಷಣ ವ್ಯವಸ್ಥೆ ಬಲಪಡಿಸುವುದರ ಜತೆಗೆ ಕೈಗಾರಿಕಾ ವಲಯಗಳಿಗೆ ಪ್ರಾತಿನಿಧ್ಯ ನೀಡುವತ್ತ ಸರ್ಕಾರ ಚಿಂತನೆ ನಡೆಸಬೇಕಿದೆ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿಗೆ ಅನುದಾನ ಕೊರತೆಯಾಗಿದೆ.
ಮಹಾರಾಷ್ಟ್ರದಲ್ಲಿ ಇಂತಹದ್ದೇ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ಭವಿಷ್ಯದಲ್ಲಿ ಚಿಂತಾಜನಕ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದರು.