

ಬೆಳಗಾವಿ: ಪ್ರತಿಯೊಂದು ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳು ತಲುಪಿದ್ದು, ಮಹಿಳೆಯರು, ಕಾರ್ಮಿಕರು ಸೇರಿ ಬಹುಜನರ ಜೀವನಮಟ್ಟ ಸುಧಾರಣೆಗೆ ಅನುಕೂಲವಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಗೋಕಾಕ ನಗರದ ಗೃಹ ಕಚೇರಿಯಲ್ಲಿ ಸೋಮವಾರ ಪಂಚ ಗ್ಯಾರಂಟಿ ಕುರಿತು ಕಿರುಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು,ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡವರು, ಕೂಲಿ ಕಾರ್ಮಿಕರು, ಮಹಿಳೆಯರು, ಮಧ್ಯಮ ವರ್ಗದವರು ಗೃಹ ಲಕ್ಷಿ$್ಮ ಹಣವನ್ನು ಕುಟುಂಬ ನಿರ್ವಹಣೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆಯ ಮೂಲಕ ಧಾರ್ಮಿಕ, ಪ್ರವಾಸಿ ತಾಣಗಳಿಗೆ ಕುಟುಂಬ ಸಮೇತರಾಗಿ ಭೇಟಿ ನೀಡುತ್ತಿದ್ದಾರೆ. ಇದರಿಂದ ವ್ಯಾಪಾರ ವಹಿವಾಟಿನಲ್ಲಿ ಏರಿಕೆಯಾಗಿದೆ. ಅಲ್ಲದೆ, ಸಾರಿಗೆ ಇಲಾಖೆಯನ್ನು ಪುನಶ್ಚೇತನಗೊಳಿಸಿದಂತಾಗಿದೆ ಎಂದರು.
ವೈದ್ಯ ಡಾ.ಗಿರೀಶ್ ಸೋನಾಲ್ಕರ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದ ಜನರನ್ನು ಆರ್ಥಿಕವಾಗಿ ಸದೃಢಗೊಳಿಸಿವೆ. ಗೃಹಲಕ್ಷಿ$್ಮ, ಶಕ್ತಿ ಯೋಜನೆಗಳು ಮಹಿಳೆಯರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿವೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಪಂಚ ಗ್ಯಾರಂಟಿಗಳು ಆರ್ಥಿಕ ಶಕ್ತಿ ತುಂಬಿವೆ ಎಂದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಇತರರಿದ್ದರು.