

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಗೆ ಬೆಳಗಾವಿ ಜಿಲ್ಲೆ ಹುಕ್ಕೇರಿಯ ಸಂಸ್ಥಾನ ಹಿರೇಮಠವು ನೀಡುವ 2024ನೇ ವರ್ಷದ ಪಂಚಾಚಾರ್ಯ ಶ್ರೀ ಪ್ರಶಸ್ತಿ ಲಭಿಸಿದೆ. ಯುಗಾದಿ ದಿನದಂದು ಶ್ರೀ ಜಗದ್ಗುರು ಪಂಚಾಚಾರ್ಯರ ಜಯಂತಿ ಯುಗಮಾನೋತ್ಸವ ನೆನಪಿನಲ್ಲಿ ಹಿರಿಯ ಮಠಾಧೀಶರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
ಶ್ರೀ ಶಾಂತಲಿಂಗ ಶ್ರೀಗಳು 5ನೇ ವಯಸ್ಸಿನಲ್ಲೇ ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಗುರುತ್ವಾಧಿಕಾರ ಪಡೆದಿದ್ದು, ತಮ್ಮ ಸುದೀರ್ ಸನ್ಯಾಸದ ಬದುಕಿನಲ್ಲಿ ಯಶಸ್ಸಿನ 90 ವಸಂತಗಳನ್ನು ಕಂಡಿದ್ದಾರೆ. ಅಮ್ಮಿನಬಾವಿ ಹಾಗೂ ಸುತ್ತಲಿನ ಗ್ರಾಮಗಳ ಮಕ್ಕಳ ವಿದ್ಯಾರ್ಜನೆಗೆ ಶ್ರೀಮಠದ ಆಶ್ರಯದಲ್ಲಿ ಶ್ರೀ ಶಾಂತೇಶ್ವರ ಪ್ರೌಢ ಶಾಲೆ, ಪ್ರಾಥಮಿಕ ಶಾಲೆ ಆರಂಭಿಸಿದ್ದಾರೆ.
ಆರಂಭದಿಂದಲೂ ಲಿಂಗಪೂಜಾ ನಿಷ್ಠರು. ವಿವಿಧ ಧರ್ಮ ೇತ್ರಗಳಲ್ಲಿ ಇಷ್ಟಲಿಂಗಾನುಷ್ಠಾನ ಕೈಕೊಂಡು ಆತ್ಮಬಲ ಸಂಪಾದಿಸಿದ್ದಾರೆ. ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಕಿರಿಯ ಶ್ರೀಗಳಾದ ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯರ ಸಮ್ಮುಖದಲ್ಲಿ ಯಏ.9ರಂದು ಬೆಳಗ್ಗೆ 11 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹುಕ್ಕೇರಿಯ ಚಂದ್ರಶೇಖರ ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.