

ಕೊಕ್ಕರ್ಣೆ: ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ವಾರಾಳಿಯಲ್ಲಿ ನೂತನ ಶಿಲಾಮಯ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ ಮತ್ತು ಶ್ರೀ ಬ್ರಹ್ಮಬೈದರ್ಕಳ ಮತ್ತು ಶ್ರೀ ಶಿವರಾಯ ಸ್ವಾಮಿ ಹಾಗೂ ಪರಿವಾರ ದೈವಗಳ ಪುನಃ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ವಾರಾಳಿ ಬಾಲಕೃಷ್ಣ ಕರಬ ಪ್ರಧಾನ ಅರ್ಚಕತ್ವದಲ್ಲಿ ಜರುಗಿತು. ದೇವಿ ಸನ್ನಿಧಿಯಲ್ಲಿ ಪಂಚದುರ್ಗಾ ದೀಪ ನಮಸ್ಕಾರ ನಡೆಯಿತು.
ಆನುವಂಶಿಕ ಮೊಕ್ತೇಸರ ವಿಠಲ ಶೆಟ್ಟಿ ವಾರಾಳಿಮನೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ ವಾರಾಳಿಮನೆ, ಗೌರವಾಧ್ಯಕ್ಷ ಕಿಶೋರ್ ಕುವಾರ್ ಹೆಗ್ಡೆ, ಸಮಿತಿ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ವಾರಾಳಿ ಒಳಬೈಲು, ಕೋಶಾಧಿಕಾರಿ ಎಂ.ಜಯರಾಮ ಶೆಟ್ಟಿ ವಾರಾಳಿಮನೆ, ಸಮಿತಿ ಪದಾಧಿಕಾರಿಗಳು, ಸದಸ್ಯರು, ಅರ್ಚಕರು, ಭಕ್ತರು ಉಪಸ್ಥಿತರಿದ್ದರು.