ಪಾಂಚಜನ್ಯ ಹಿಂದು ಗಣಪತಿ

ಪಾಂಚಜನ್ಯ ಹಿಂದು ಗಣಪತಿ
Published on

ಹಾಸನ: ಪಾಂಚಜನ್ಯ ಹಿಂದು ಗಣಪತಿ ಸಮಿತಿಯಿಂದ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆವರಣದಲ್ಲಿ ಬುಧವಾರ ಗಣಪತಿ ಮೂರ್ತಿಯನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಯಿತು.

ಜಿಲ್ಲೆಯ ಶಾಸಕರು, ಗಣ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಭಕ್ತರು ಸಮ್ಮುಖದಲ್ಲಿ ಪೂಜಾ ಕೈಂಕರ್ಯ ಜರುಗಿದವು.

ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿ ಮಾತನಾಡಿ, ಸ್ವಯಂಸೇವಕರು ಸೇರಿ ಪ್ರತಿ ವರ್ಷದಂತೆ ಈ ಬಾರಿಯೂ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಜಿಲ್ಲೆಯ ಜನತೆಗೆ ಹಾಗೂ ಉತ್ತಮ ಮಳೆ-ಬೆಳೆ ಕಲ್ಪಿಸುವಂತೆ ದೇವರಲ್ಲಿ ಪ್ರಾರ್ಥಿಸಲಾಗಿದೆ. ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದರು.

ಬೇಲೂರು ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ರಾಜ್ಯದಲ್ಲಿಯೇ ಗಮನಸೆಳೆಯುವ ರೀತಿಯಲ್ಲಿ ಪಾಂಚಜನ್ಯ ಗಣಪತಿಯನ್ನು ಪ್ರತಿವರ್ಷ ಪ್ರತಿಷ್ಠಾಪಿಸಲಾಗುತ್ತಿದೆ. ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಲಾಗಿದೆ ಎಂದರು.

ಪಾಂಚಜನ್ಯ ಹಿಂದು ಗಣಪತಿ ಸಮಿತಿ ಗೌರವಾಧ್ಯಕ್ಷ ದಯಾನಂದ್ ಮಾತನಾಡಿ, ಸೆ.3ರಂದು ಶಾಸ್ತ್ರೋಕ್ತವಾಗಿ ಗಣಪತಿ ವಿಸರ್ಜಿಸಲಾಗುತ್ತದೆ. ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ನಮ್ಮ ಗಣಪತಿ ಪರಿಸರ ಸ್ನೇಹಿಯಾಗಿದ್ದು, ಇಡೀ ವಿಶ್ವದಲ್ಲಿ ಶಾಂತಿ, ನೆಮ್ಮದಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಗುವುದು ಎಂದರು.

ಸೆಪ್ಟಂಬರ್ 3 ರಂದು ಮಧ್ಯಾಹ್ನ 2 ಗಂಟೆಗೆ ಬೃಹತ್ ಶೋಭಾಯಾತ್ರೆ ಆರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುತ್ತದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಪಾಂಚಜನ್ಯ ಹಿಂದು ಗಣಪತಿ ಸಮಿತಿ ಅಧ್ಯಕ್ಷ ವಾಸು, ಕಾರ್ಯದರ್ಶಿ ವೇಣುಗೋಪಾಲ್, ವಿಜಯ್‌ಕುಮಾರ್ ನಾರ್ವೆ, ಹಿಂದು ಜಾಗರಣ ವೇದಿಕೆಯ ಲೋಕೇಶ್, ವಿಶ್ವ ಹಿಂದು ಪರಿಷತ್ ವಿಭಾಗೀಯ ಕಾರ್ಯದರ್ಶಿ ಮಹಿಪಾಲ್, ಕಂಚಮಾರನಹಳ್ಳಿ ಕಾಂತಣ್ಣ, ಅಖಿಲ ಭಾರತ ವೀರಶೈವ ಲಿಂಗಾಯತ ಸಮಿತಿ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಸಮಿತಿಯ ಮೋಹನ್, ಮಹೇಶ್, ಲಾವಣ್ಯ, ಶ್ವೇತಾ, ಅನಿತಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net