ಪಂಚಲಿಂಗೇಶ್ವರ ಪ್ರೌಢಶಾಲೆ ಕ್ರೀಡಾಕೂಟ

New Project (19)
Published on

ಪುತ್ತೂರು ಗ್ರಾಮಾಂತರ: ಈಶ್ವರಮಂಗಲದ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ವಾರ್ಷಿಕ ಕ್ರೀಡಾಕೂಟ ನಡೆಯಿತು. ಈಶ್ವರಮಂಗಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಕ್ರೀಡಾಜ್ಯೋತಿ ತಂದು ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಗಜಾನನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ನರೇಂದ್ರ ಭಟ್ ಧ್ವಜಾರೋಹಣಗೈದರು. ಶಾಲೆಯ ಹಳೇ ವಿದ್ಯಾರ್ಥಿ ಉದ್ಯಮಿ ತಿಲಕ್ ಬಿ. ಕ್ರೀಡಾಜ್ಯೋತಿಯ ಮೂಲಕ ದೀಪ ಪ್ರಜ್ವಲನೆ ಮಾಡಿ ಕ್ರೀಡಾಕೂಟ ಉದ್ಘಾಟಿಸಿದರು. ಮುಖ್ಯಶಿಕ್ಷಕಿ ವನಿತಾ ಕೆ.ಅವರು ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕ ಸುರೇಶ್ ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಮುರಳಿ ಮೋಹನ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿ ಪ್ರತಿಮಾ ವಂದಿಸಿದರು. ವಿಜ್ಞಾನ ಶಿಕ್ಷಕಿ ವಂದನಾ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net