

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಪಂಚಮಸಾಲಿ ಸಮಾಜದವರು ನ್ಯಾಯ ಸಮ್ಮತ ಬೇಡಿಕೆಗಾಗಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಸರ್ಕಾರ ಹೋರಾಟಗಾರರ ಮೇಲೆ ಲಾಠಿಚಾರ್ಜ್ ನಡೆಸಿ ಅಮಾನವೀಯವಾಗಿ ವರ್ತಿಸಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ನ್ಯಾಯದಡಿ ಪಂಚಮಸಾಲಿಗಳಿಗೆ ನ್ಯಾಯ ಕೊಡುವ ಕೆಲಸ ಮಾಡಲು ಒತ್ತಾಯಿಸಿದರೆ ದುಂಡಾವರ್ತನೆ ಮಾಡಿದೆ. ಇಡಿ ಘಟನೆ ಕುರಿತು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಿಸುವಂತೆ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆಗಿಳಿಯುವಂತೆ ಮಾಡಿz್ದೆÃ ಕಾಂಗ್ರೆಸ್ ಸರ್ಕಾರ. ಬೇಡಿಕೆಯನ್ನು ಆಲಿಸಿ ಈಡೇರಿಸಿದ್ದರೆ. ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿ ಹೋರಾಟಕ್ಕಿಳಿಯುವ ಪ್ರಸಂಗ ಎದುರಾಗುತ್ತಿರಲಿಲ್ಲ. ಸರ್ಕಾರದ ನಡೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಖಂಡಿಸಿದ್ದಾರೆ.
ರಾಜೀನಾಮೆ ಕೊಡುವವರು ಎಲ್ಲಿz್ದÁರೆ?
ಕಾಂಗ್ರೆಸ್ ವಿಪP್ಷÀದಲ್ಲಿz್ದÁಗ ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಬAಧಿಸಿ ಮೊಸಳೆ ಕಣ್ಣೀರು ಸುರಿಸಿ, ಕೆಲ ಮುಖಂಡರು ರಾಜೀನಾಮೆ ಕೊಡುವ ಮಾತನಾಡಿದ್ದರು. ಈಗ ಲಾಠಿ ಪ್ರಹಾರ ಆಗಿದೆ. ಸ್ವಾಮೀಜಿಗಳನ್ನು ಬಂಧಿಸಲಾಗಿದೆ. ಸಚಿವೆ ಲಕ್ಷಿö್ಮÃ ಹೆಬ್ಬಾಳಕರ್ ಸೇರಿ ರಾಜೀನಾಮೆ ಕೊಡುತ್ತೇವೆ ಎಂದಿದ್ದವರು ಎಲ್ಲಿದ್ದಿರಿ, ಯಾವ ಬಿಲ ಸೇರಿಕೊಂಡಿದ್ದೀರಿ? ಎಂದು ತೆಲ್ಕೂರ ಖಾರವಾಗಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್‌ನವರು ಯಾವ ಮುಖ ಇಟ್ಟುಕೊಂಡು ಜನರಿಗೆ ಮುಖ ತೋರಿಸುತ್ತಾರೆ? ಮನವಿ ಸ್ವೀಕರಿಸಲು ಸಾಧ್ಯವಾಗದಷ್ಟು ಮುಖ್ಯಮಂತ್ರಿಗಳು ಸರ್ವಾಧಿಕಾರಿ ಆಗಿಬಿಟ್ಟರೇ ?ಲಾಠಿಚಾರ್ಜï ಮಾಡಿಸುವುದೇ ಸಮಾಜವಾದವೇ ಎಂದು ಟೀಕಿಸಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ವರ್ಗೀಕರಣ ಮಾಡಿ ನಿಗದಿಪಡಿಸಿದ್ದ ಮೀಸಲಾತಿಯನ್ನಾದರೂ ಜಾರಿಗೆ ತನ್ನಿ ಎಂದು ಆಗ್ರಹಿಸಿದ್ದಾರೆ.