ಹುಬ್ಬಳ್ಳಿಯಲ್ಲಿ ಪಂಚಮಸಾಲಿ ರಥಯಾತ್ರೆಗೆ ಚಾಲನೆ

hubli
Published on

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಗುರುವಾರ ಪಂಚಮಸಾಲಿ ರಥಯಾತ್ರೆಗೆ ನಗರದ ಚೆನ್ನಮ್ಮ ವೃತ್ತದಲ್ಲಿ ಚಾಲನೆ ದೊರಕಿತು.

ಪಂಚಮಸಾಲಿ ಸಮಾಜವನ್ನು 2ಎ ಮೀಸಲಾತಿಗೆ ಸೇರಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇದೇ 21 ರಂದು ಬೃಹತ್  ಸಮಾವೇಶ ನಡೆಯಲಿದೆ. ಸಮಾವೇಶದ ಅಂಗವಾಗಿ ಹುಬ್ಬಳ್ಳಿಯಲ್ಲಿ ರಥಯಾತ್ರೆಗೆ ಚಾಲನೆ ದೊರಕಿತು.

ಧಾರವಾಡ ಜಿಲ್ಲೆಯಾದ್ಯಂತ ಪಂಚಮಸಾಲಿ ಮೀಸಲಾತಿ ಕುರಿತು ಜನಜಾಗೃತಿ ನಡೆಸಲಿರುವ ರಥಯಾತ್ರೆಗೆ ವಿವಿಧ ಮಠಾಧೀಶರು ಚಾಲನೆ ನೀಡಿದರು. ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರ್ ಸೇರಿದಂತೆ ಸಮಾಜದ ಹಲವು ಮುಖಂಡರು ರಥಯಾತ್ರೆಯಲ್ಲಿ ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net