

ಕೋಟ: ಸಮಾಜದ ಬಗ್ಗೆ ಸದಾ ತುಡಿತ ಹೊಂದಿರುವ ಈಶ್ವರ್ ಮಲ್ಪೆ ತಂಡದ ಸಾಮಾಜಿಕ ಕಾರ್ಯ ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಜನಪರ ಕಾರ್ಯಕ್ರಮಗಳಿಂದ ಪಂಚವರ್ಣ ಸಂಸ್ಥೆ ಮಾದರಿಯಾಗಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿ ಸದಸ್ಯ ಕೆ.ಅನಂತಪದ್ಮನಾಭ ಐತಾಳ್ ಹೇಳಿದರು.
ಮಂಗಳವಾರ ಕೋಟ ಅಮೃತೇಶ್ವರಿ ದೇಗುಲದಲ್ಲಿ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಜೀವರಕ್ಷಕ ಟೀಮ್ ಈಶ್ವರ್ ಮಲ್ಪೆ ಅವರ ಆಶ್ರಯದಲ್ಲಿ ನಡೆದ ಶ್ರವಣ ಉಚಿತ ತಪಾಸಣೆ, ರಿಯಾಯಿತಿ ದರದಲ್ಲಿ ಶ್ರವಣ ಸಾಧನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾಮಪಂಚಾಯಿತಿ ಅಧ್ಯಕ್ಷ ಸತೀಶ್ ಕುಂದರ್, ನಾಗರಾಜ್ ಪುತ್ರನ್, ಲವ ಬಂಗೇರ, ಡಾ.ಅಂಕಿತಾ, ಲಲಿತಾ ಪೂಜಾರಿ, ಮನೋಹರ್ ಪೂಜಾರಿ ಉಪಸ್ಥಿತರಿದ್ದರು. ಸುಜಾತ ಬಾಯರಿ ನಿರೂಪಿಸಿದರು. ವಸಂತಿ ಹಂದಟ್ಟು ಸ್ವಾಗತಿಸಿದರು. ರವೀಂದ್ರ ವಂದಿಸಿದರು. ದಿನೇಶ್ ಆಚಾರ್, ಅಮೃತೇಶ್ವರಿ ದೇಗುಲದವರು ಸಹಕರಿಸಿದರು.