ಪಂಚವರ್ಣ ಕಾರ್ಯ ಶ್ಲಾಘನಾರ್ಹ

poster bidugade
ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಪೋಸ್ಟರನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಬಿಡುಗಡೆಗೊಳಸಿದರು.
Published on

ಕೋಟ: ಸಂಘ ಸಂಸ್ಥೆಗಳು ನಿರಂತರ ಸಾಮಾಜಿಕ ಕಾಳಜಿ, ಬದ್ಧತೆ ತೋರಬೇಕು. ಈ ನಿಟ್ಟಿನಲ್ಲಿ ಪಂಚವರ್ಣದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ನುಡಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ನ.16ರಂದು ನಡೆಯಲಿರುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.

ಜಯರಾಜ್ ವಿ.ಶೆಟ್ಟಿ, ಪಂಚವರ್ಣ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್, ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಕೋಟ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಮಣೂರು ಫ್ರೆಂಡ್ಸ್ ನಿಕಟಪೂರ್ವ ಅಧ್ಯಕ್ಷ ದಿನೇಶ್ ಆಚಾರ್, ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಅಧ್ಯಕ್ಷೆ ವನೀತಾ ಉಪಾಧ್ಯಾ, ಪಂಚವರ್ಣ ಮಹಿಳಾ ಮಂಡಲ ಕಾರ್ಯದರ್ಶಿ ವಸಂತಿ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು. ರವೀಂದ್ರ ಕೋಟ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net