

ಕುಶಾಲನಗರ:
ಕೂಡುಮಂಗಳೂರು ಗ್ರಾಮ ಪಂಚಾಯತಿ ಸಾಮಾನ್ಯ ಸಭೆ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಮುಂದಿನ ತಿಂಗಳಲ್ಲಿ ಅನೆ ಕೆರೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಇರುವ ಕೋಳಿ, ಆಡು ಮಾಂಸದ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ ಮಾಡುವ ಮೂಲಕ ಗ್ರಾಮ ಪಂಚಾಯತಿಗೆ ಆದಾಯ ಕ್ರೋಢೀಕರಿಸುವ ವಿವಿಧ ಯೋಜನೆಯಗಳ ಬಗ್ಗೆ ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಈಗಾಗಲೇ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕ್ರಿಯಾ ಯೋಜನೆ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವ ಬಗ್ಗೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಕಲ್ಪಿಸುವ ವಿಷಯ ಹಾಗೂ ವಸತಿ ರಹಿತರಿಗೆ ನಿವೇಶನದ ಜಾಗವನ್ನು ಒದಗಿಸುವ ಬಗ್ಗೆ ಚರ್ಚೆಗಳು ನಡೆದವು.
ಬೇಸಿ ಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆಗಳು ನಡೆದವು.
ಅಧ್ಯಕ್ಷ ಭಾಸ್ಕರ್ ನಾಯಕ್ ಮಾತಾನಾಡಿ ಸದಸ್ಯರುಗಳ ಅಭಿಪ್ರಾಯಗಳನ್ನು ನಿಯಮಾನುಸಾರ ತೆಗೆದುಕೊಂಡು ಕಾರ್ಯಗತಗೊಳಿಸಲಾಗುವುದು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲಾ ಅಂಗಡಿ ಮಾಲೀಕರು ತಮ್ಮ ತಮ್ಮ ಅಂಗಡಿ ನಾಮ ಫಲಕಗಳಲ್ಲಿ ಕಡ್ಡಾಯವಾಗಿ ಶೇಕಡಾ 60ರಷ್ಟು ಕನ್ನಡ ಪದಗಳನ್ನು ಬಳಸುವಂತೆ ಸೂಚನೆ ನೀಡಲಾಗುವುದು. ಸಾಮಾನ್ಯ ಸಭೆಯ ತೀರ್ಮಾನದಂತೆ ಎಲ್ಲಾ ವಾರ್ಡ್ಗಳಿಗೆ ಮೂಲಭೂತ ಸೌಕರ್ಯಗಳ ಜೊತೆಯಲ್ಲಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಗೆ ಹೆಚ್ಚಿನ ಕ್ರಮ ವಹಿಸಲಾಗುವುದು, ಹೊಸ ಯೋಜನೆಯ ಅನುಷ್ಠಾನದ ಮೂಲಕ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪಿಡಿಒ ಸಂತೋಷ್ ಸÀರ್ಕಾರದ ಹೊಸ ಯೋಜನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಶಶಿಕಲಾ, ಸರ್ವ ಸದಸ್ಯರು ಹಾಜರಿದ್ದರು.