ಶುಚಿತ್ವಕ್ಕೆ ಆದ್ಯತೆ ನೀಡಲು ಸಭೆಯಲ್ಲಿ ನಿರ್ಧಾರ

panchayath
Published on

ಕುಶಾಲನಗರ:

ಸಮೀಪದ ಕೂಡಿಗೆ ಗ್ರಾಮ ಪಂಚಾಯತಿಯ ಮಾಸಿಕ ಸಭೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ. ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಶುಚಿತ್ವಕ್ಕೆ ಹೆಚ್ಚಿನ ಅದ್ಯತೆ ನೀಡುವುದರ ಜತೆಯಲ್ಲಿ ಎಲ್ಲಾ ವಾರ್ಡ್ಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜು ಮಾಡುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಗುಣವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಬಗ್ಗೆ ಚರ್ಚೆಗಳು ನಡೆದವು. ಈಗಾಗಲೇ ಕೂಡಿಗೆಯಿಂದ ಹೆಬ್ಬಾಲೆರವರೆಗೆ ನಿಗದಿತ ಅಪಘಾತ ವಲಯದ ಹಾಸನ ಹೆದ್ದಾರಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಅಗಲಿಕರಣದ ಸಂದರ್ಭದಲ್ಲಿ ಸಂಬAಧಿಸಿದ ಇಲಾಖೆಯವರು ರಸ್ತೆಗೆ ಹೊಂದಿಕೊAಡAತೆ ಇರುವ ಮರ ಮತ್ತು ಮನೆಯ ಛಾವಣಿಗಳನ್ನು ಇಲಾಖೆಯ ನಿಯಮಾನುಸಾರ ತೆರವುಗೊಳಸಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಸಂಬAಧಿಸಿದವರಿಗೆ ಪತ್ರ ವ್ಯವಹಾರ ಮಾಡಲು ಸಭೆಯಲ್ಲಿ ಸೂಚನೆ ನೀಡಲಾಯಿತು.

ಅಧ್ಯಕ್ಷ ಕೆ.ಟಿ. ಗಿರೀಶ್ ಮಾತಾನಾಡಿ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಸಮಗ್ರವಾದ ವ್ಯವಸ್ಥೆವನ್ನು ಕೈಗೊಳ್ಳುವ ಮೂಲಕ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಾಗುವುದು ಎಂದರು. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.

ಅಭಿವೃದ್ಧಿ ಅಧಿಕಾರಿ ಮಂಜಳಾ ಸಭೆಗೆ ಸರ್ಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಟಿ.ಪಿ. ಹಮೀದ್, ಮಂಗಳ, ಮೋಹಿನಿ, ಅರುಣ್ ರಾವ್, ಅನಂತ, ಹೆಚ್.ಎಸ್. ರವಿ, ಪಲ್ಲವಿ, ಲಕ್ಷಿ, ಚಂದ್ರು, ಜಯಶೀಲಾ, ಕಾರ್ಯದರ್ಶಿ ಪುನೀತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net