ಕುಡಿಯುವ ನೀರಿಗಾಗಿ ಪಂಚಾಯಿತಿ ಸದಸ್ಯನಿಂದಲೇ ಅರೆಬೆತ್ತಲೆ ಧರಣಿ!

1268863
Published on

ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯಿತಿ ಸದಸ್ಯನೇ ಪ್ರತಿಭಟನೆ ನಡೆಸುವ ಪರಿಸ್ಥಿತಿ ಎದುರಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ದುಗಡಿಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಕುಡಿಯುವ ನೀರು ಪೂರೈಸಬೇಕೆಂದು ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯತಿ ಸದಸ್ಯ ಗೋಪಾಲಯ್ಯ ಶನಿವಾರ ಪಂಚಾಯಿತಿ ಎದುರೇ ಪ್ರತಿಭಟನೆ ನಡೆಸಿ, ಲಕ್ಷ್ಮೀನರಸಿಂಹಸ್ವಾಮಿ ದೇವರ ಜಾತ್ರೆಗೆ ನೀರಿನ ಅಭಾವ ಇರುವುದರಿಂದ ಹೆಸರಳ್ಳಿ ಊರಿಗೆ ನೀರು ನೀಡಬೇಕೆಂದು ಪಟ್ಟು ಹಿಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net