

ಬೆಳಗಾವಿ: ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ವರ್ಗದವರ ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸದಂತಹ ಹಲವು ಕಾರ್ಯಗಳಿಗೆ ಸಹಕಾರಿಯಾಗಿವೆ ಎಂದು ಪಂಚಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಈರಪ್ಪ ಪಾಟೀಲ ಹೇಳಿದರು.
ಸ್ಥಳೀಯ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ತಾಲೂಕುಮಟ್ಟದ ಪಂಚಗ್ಯಾರಂಟಿ ಯೋಜನೆ ಅನುಷ್ಠಾನ ಸಭೆಯಲ್ಲಿ ಮಾತನಾಡಿದರು. ಮಹಿಳಾ ಸಬಲೀಕರಣಕ್ಕೆ ಸರ್ಕಾರ ಒತ್ತು ನೀಡಿದ್ದು, ಶಕ್ತಿ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳನ್ನು ಕಟ್ಟಕಡೆಯ ಜನರಿಗೂ ತಲುಪಿಸುವಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪದಾಧಿಕಾರಿಗಳು ಕಾರ್ಯನಿರ್ವಹಿಸಿ ತಮಗೆ ಒದಗಿಸಿರುವ ಜವಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಅರ್ಹ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕೆಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಪಂಚಗ್ಯಾರಂಟಿ ಯೋಜನೆ ಅರ್ಹರಿಗೆ ದೊರಕುಂತೆ ನೋಡಿಕೊಳ್ಳಬೇಕು ಎಂದರು.
ಪರಶುರಾಮ ಹೊಳೆನ್ನವರ ಸ್ವಾಗತಿಸಿದರು. ತಾಲೂಕು ಯೋಜನಾಧಿಕಾರಿ ಎನ್.ಎಸ್. ಹೂಗಾರ, ವಿವಿಧ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿ ಇದ್ದರು.