ಪಂಚಮಸಾಲಿ ಸಮುದಾಯದ ಬೇಡಿಕೆ ಇಂದೇ ಈಡೇರುತ್ತಾ? ಮಧ್ಯಂತರ ವರದಿ ಸಲ್ಲಿಕೆ ಆಗ್ತಿದ್ದಂತೆ ಸಿಎಂ ಹೇಳಿದ್ದೇನು?

panchamasali samudaya
Published on

ಬೆಳಗಾವಿ: ಒಂದೆಡೆ ಸಚಿವ ಸಂಪುಟ ಸಭೆ, ಮತ್ತೊಂದೆಡೆ ಪಂಚಮಸಾಲಿ ಸಮುದಾಯದ ಪ್ರತಿಭಟನಾ ಸಮಾವೇಶದ ಮಧ್ಯೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದು, ಪಂಚಮಸಾಲಿ ಸಮುದಾಯದ ಬೇಡಿಕೆ ಇಂದೇ ಈಡೇರುತ್ತಾ? ಎಂಬ ಕುತೂಹಲ ಸಹಜವಾಗಿ ಮೂಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ‌ ವರದಿ ಮಂಡಿಸಿ ಒಪ್ಪಿಗೆ ಪಡೆಯುವ ಸಾಧ್ಯತೆಗಳಿದ್ದು, ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶವು‌ ವಿಜಯೋತ್ಸವವಾಗಿ ಪರಿವರ್ತನೆಯಾಗಲಿದೆ ಎಂದು ತರ್ಕಿಸಲಾಗುತ್ತಿದೆ.

ಈ ಕುರಿತು ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ಸರ್ಕಾರಕ್ಕೆಈಗಷ್ಟೇ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಕೂಡಲೇ ಈ ಬಗ್ಗೆ ಕಾನೂನು ಸಂಸದರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೀಸಲಾತಿ ಕುರಿತು ಸದಾಶಿವ ಆಯೋಗ ಹಾಗೂ ರಂಗರಾಜು ಆಯೋಗದ ವರದಿಗಳು ಬಂದಿವೆ. ಅವು ಇಂದಿಗೂ ಆಯೋಗದ ಮಟ್ಟದಲ್ಲೇ ಉಳಿದಿರುವುದರಿಂದ ಸರ್ಕಾರದಿಂದ ಯಾವುದೇ ಕ್ರಮ‌ ಕೈಗೊಂಡಿರಲಿಲ್ಲ. ಆದರೆ, ಹೆಗಡೆ ಅವರು ಈಗಷ್ಟೇ ಮಧ್ಯಂತರ ವರದಿ ಸಲ್ಲಿಸಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸೇರಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net