

ಪಾಂಡವಪುರ : ಕಳೆದ ನಾಲ್ಕು ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಪಟ್ಟಣದ ವಿ.ಸಿ. ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್ ಮಂಗಳವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪಾಂಡವಪುರ ಪಟ್ಟಣದಿಂದ ಕೆ.ಆರ್.ಪೇಟೆಗೆ ತೆರಳುವ ಮುಖ್ಯ ರಸ್ತೆ ಪಕ್ಕದಲ್ಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಖಾಸಗಿ ವ್ಯಕ್ತಿಯೊಬ್ಬರು ತಡೆಯೊಡ್ಡಿದ ಕಾರಣ ವಿಳಂಬವಾಗಿತ್ತು. ಅನುದಾನವಿದ್ದರೂ ಕಾಮಗಾರಿ ನಡೆಯದಂತೆ ತಕರಾರು ಮಾಡಿದ್ದರು ಎಂದರು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನದಂತೆ ಕಾಮಗಾರಿ ಆರಂಭಿಸಲಾಗಿದೆ. ಪುರಸಭೆಯ 15ನೇ ಹಣಕಾಸು ಯೋಜನೆಯಡಿ 3.30 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣವೂ ನಡೆಯಲಿದೆ ಎಂದರು. ಇಂಜಿನಿಯರ್ ಯಶಸ್ವಿನಿ ಮತ್ತು ಪುರಸಭೆ ಸಿಬ್ಬಂದಿ ಇದ್ದರು.