

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ವಿಭಜಕ ಬಳಿಯಲ್ಲಿ ನಿಂತಿದ್ದ ಕೃಷ್ಣಪ್ಪ ಪೂಜಾರಿ (66) ಎಂಬುವರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದು, ಪೊಲೀಸರು ಕುಂದಾಪುರದಲ್ಲಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಪಘಾತದ ಸಂದರ್ಭದಲ್ಲಿ ಅದೇ ಸ್ಥಳದಲ್ಲಿ ತೆರಳುತ್ತಿದ್ದ ಸ್ಕೂಟಿಯೊಂದು ಸ್ಕಿಡ್ ಆಗಿದ್ದು, ಸ್ಕೂಟರ್ ಸವಾರ ಕೊಪ್ಪಲಂಗಡಿ ನಿವಾಸಿ ವಿಶ್ವನಾಥ ಶೆಟ್ಟಿ ಎಂಬುವರೂ ಗಾಯಗೊಂಡಿದ್ದಾರೆ.
ಇದೇ ಭಾಗದಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಉಡುಪಿ -ಮಂಗಳೂರು ಹೆದ್ದಾರಿ ಬಳಿ ರಸ್ತೆ ದಾಟುತ್ತಿದ್ದ ಮರ್ಣೆ ನಿವಾಸಿ ಕೃಷ್ಣಪ್ಪ ಪೂಜಾರಿ (77)ಅವರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾಂಗಾಳದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ಕಾರಣವಾದ ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ