ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪಾಂಗಾಳ ಬಾಬು ಕೊರಗ

babu koraga
ಪಾಂಗಾಳ ಬಾಬು ಕೊರಗ
Published on

ಪಡುಬಿದ್ರಿ: ಪಲಿಮಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನ.16ರಂದು ನಡೆಯುವ ಕಾಪು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪಾಂಗಾಳ ಬಾಬು ಕೊರಗ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾಪು ಘಟಕ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ತಿಳಿಸಿದರು. ನೆಲಮೂಲ ಪಾರಂಪರಿಕ ಕೊರಗ ಸಮುದಾಯದ ಹಿರಿಯ ಸಂಘಟಕ ಹಾಗೂ ಕೊರಗ ಭಾಷಾ ತಜ್ಞ, ಸಾಹಿತಿ, ಸಂಶೋಧಕರಾಗಿರುವ ಪಾಂಗಾಳ ಬಾಬು ಕೊರಗ ಅವರು, ಕೊರಗ ಸಮುದಾಯದ ಆದಿಬುಡ ಮೂಲ ಅಸ್ಮಿತೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರತಿಪಾದಿಸಿದ ಗಟ್ಟಿ ಧ್ವನಿಯಾಗಿದ್ದಾರೆ. ಅವರು 1988ರಿಂದ ನಿರಂತರವಾಗಿ ಕೊರಗ ಸಮುದಾಯದ ಸಂಘಟನೆಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net