

ಮಳವಳ್ಳಿ: ತಾಲೂಕಿನ ರಾಗಿ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಆರ್.ಬಿ.ಮಹದೇವಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಚುನಾವಣೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಲೋಕೋಪಯೋಗಿ ಇಲಾಖೆಯ ಎಇಇ ಸೋಮಶೇಖರ್ ಅವರು ಆರ್.ಬಿ.ಮಹದೇವಸ್ವಾಮಿ ಅವರ ಅವಿರೋಧ ಆಯ್ಕಯನ್ನು ಘೋಷಿಸಿದರು.
ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೂ ಮಾಲೆ ಹಾಕಿ ಅಭಿನಂದಿಸಿದರು.
ನೂತನ ಅಧ್ಯಕ್ಷ ಆರ್.ಬಿ.ಮಹದೇವಸ್ವಾಮಿ ಮಾತನಾಡಿ, ತಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ಸದಸ್ಯರು ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಮನ್‌ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ಮತ್ತು ಎಲ್ಲ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದ ತಿಳಿಸಿದರು. ಎಲ್ಲರ ಸಹಕಾರದೊಂದಿಗೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಪ್ರಭು ಹಂಗ್ರಾಪುರ, ಉಪಾಧ್ಯಕ್ಷೆ ನಾಗಮ್ಮ ಇತರೆ ಸದಸ್ಯರು ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಆನಂದರಾಜು, ಶಿವಣ್ಣ, ಮಹದೇವಪ್ಪ, ಪರಶಿವಮೂರ್ತಿ, ಸಿದ್ದಪ್ಪ, ಕುಮಾರ, ನಾಗೇಂದ್ರಮೂರ್ತಿ, ಪುಟ್ಟರಾಜು, ಚಂದ್ರಶೇಖರ್, ರಘು, ರಾಜು, ಗ್ರಾಪಂ ಪಿಡಿಒ ಹಿರಣ್ಣಯ್ಯ, ಕಾರ್ಯದರ್ಶಿ ಚಲುವರಾಜು ಮತ್ತಿತರರು ಇದ್ದರು.