ಟ್ರಾೃಕ್ಟರ್ ಪಲ್ಟಿಯಾಗಿ ವ್ಯಕ್ತಿ ಸಾವು

orig_44_1669757112
Published on

ಶಿಗ್ಗಾಂವಿ: ಟ್ರಾೃಕ್ಟರ್ ಪಲ್ಟಿಯಾಗಿ ಅದರಲ್ಲಿ ಕುಳಿತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಪಾಣಿಗಟ್ಟಿ ಗ್ರಾಮದ ಬಳಿ ಸೋಮವಾರ ಸಂಭವಿಸಿದೆ.
ತಾಲೂಕಿನ ಮಾದಾಪುರ ಗ್ರಾಮದ ಜಿಲಾನಿ ರಾಜೇಸಾಬ ಓಲೇಕಾರ (35) ಮೃತ ದುರ್ದೈವಿ.
ಈತ ಟ್ರಾೃಕ್ಟರ್‌ನಲ್ಲಿ ಕುಳಿತು ಪಾಣಿಗಟ್ಟಿಯಿಂದ ಇಂಗಳಗಿ ಗ್ರಾಮಕ್ಕೆ ತೆರಳುತ್ತಿದ್ದ. ಈ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಾೃಕ್ಟರ್ ಪಲ್ಟಿಯಾಗಿದೆ. ಇದರಿಂದ ಜಿಲಾನಿ ಕೆಳಗಡೆ ಸಿಲುಕಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net