ಪಂಜ ಪಂಚಲಿಂಗೇಶ್ವರ ದೇಗುಲ

panja degula
ಪಂಜ ದೇವಳದ ನಾಗರಕಟ್ಟೆಯಲ್ಲಿ ನಾಗರಪಂಚಮಿ ಶ್ರದ್ಧಾ ಭಕ್ತಿಯಿಂದ ನೆರವೇರಿತು.
Published on

ಸುಬ್ರಹ್ಮಣ್ಯ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ನಾಗರಪಂಚಮಿ ಭಕ್ತಿ ಸಡಗರದಿಂದ ಆಚರಿಸಲಾಯಿತು. ಶ್ರೀ ದೇವಳ ನಾಗನಕಟ್ಟೆಗಳಲ್ಲಿ ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಅರ್ಚಕ ರಾಮಚಂದ್ರ ಭಟ್ ವೈಧಿಕ ಕಾರ್ಯಕ್ರಮ ನೆರವೇರಿಸಿದರು. ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ರೈ ಪಲ್ಲತ್ತಡ್ಕ, ಧರ್ಮಪಾಲ ಗೌಡ ಮರಕಡ, ಧರ್ಮಣ್ಣ ನಾಯ್ಕ ಗರಡಿ, ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ ಕಾಯಂಬಾಡಿ, ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಕಾಯಂಬಾಡಿ, ಮಾಲಿನಿ ಕುದ್ವ, ಪವಿತ್ರಾ ಮಲ್ಲೆಟಿ, ಗೌರವ ಸಲಹೆಗಾರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net