ಕವಿ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಪೂರ್ವಭಾವಿ ಸಭೆ

panje
Published on

ಮಡಿಕೇರಿ:

ಕವಿ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮದ ಅವಶ್ಯಕತೆ ಕುರಿತು ಎಂ.ಪಿ. ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ಸಾಹಿತಿಗಳಾದ ಡಾ. ಜೆ. ಸೋಮಣ್ಣ, ಕಸಾಪ ಮಡಿಕೇರಿ ತಾಲೂಕು ನಿಕಟಪೂರ್ವ ಅಧ್ಯಕ್ಷ ಅಂಬೇಕಲ್ ನವೀನ್, ಶಿಕ್ಷಣ ಇಲಾಖೆಯ ಗುರುರಾಜ್, ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರಸನ್ನ ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಕಾರ್ಯಕ್ರಮದ ಕುರಿತು ಸಲಹೆ ನೀಡಿದರು.

ಕಾರ್ಯಕ್ರಮದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಮಡಿಕೇರಿ ಶಾಸಕ ಡಾ. ಮಂತÀರ್ ಗೌಡ ಮತ್ತು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರನ್ನು ಕೋರಿಕೊಂಡು ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಣಧಿಕಾರಿ, ಪೊಲೀಸ್ ಅಧೀಕ್ಷಕರು ಪೋಷಕರಾಗಿಯೂ ಶಿಕ್ಷಣ ಇಲಾಖೆಯ ಮುಖ್ಯಸ್ಥರು, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ವಿಶೇಷ ಅಹ್ವಾನಿತರಾಗಿ ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ತಾಲೂಕು ಹೋಬಳಿ ಅಧ್ಯಕ್ಷರುಗಳು ಜಿಲ್ಲೆಯ ಇತರ ಸಂಘ-ಸAಸ್ಥೆಗಳ ಅಧ್ಯಕ್ಷರುಗಳನ್ನು ಒಳಗೊಂಡ ಸಮಿತಿ ರಚಿಸುವಂತೆ ತೀರ್ಮಾನಿಸಲಾಯಿತು.

ಫೆ7ರಂದು ಕಾರ್ಯಕ್ರಮ ನಡೆಸುವಂತೆ ತಾತ್ಕಾಲಿಕ ದಿನ ನಿಗದಿಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಪಂಜೆಯವರ ಬದುಕು, ಬರಹ, ಸಾಹಿತ್ಯ, ನಾಟಕ, ಕವನ ಇವುಗಳ ಕುರಿತು ರಾಜ್ಯದ ಹಿರಿಯ ಸಾಹಿತಿಗಳಿಂದ ವಿಚಾರಗೋಷ್ಠಿ ನಡೆಸುವಂತೆಯೂ, ಶಾಲಾ ವಿದ್ಯಾರ್ಥಿಗಳಿಂದ ಪಂಜೆಯವರ ಹಾಡುಗಳ ನೃತ್ಯರೂಪಕ ಮತ್ತು ಗೀತ ಗಾಯನ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲಾಯಿತು ಸಭೆಯಲ್ಲಿ ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್ ಸಂಪತ್ ಕುಮಾರ್, ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಹೋಬಳಿ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net