ಅಧ್ಯಕ್ಷರಾಗಿ ಪಾರಂಪಳ್ಳಿ ನರಸಿಂಹ ಐತಾಳ್ ಆಯ್ಕೆ

adhyaksha
ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಪಾರಂಪಳ್ಳಿ ನರಸಿಂಹ ಐತಾಳ್ ಆಯ್ಕೆಯಾಗಿದ್ದಾರೆ
Published on

ಕೋಟ: ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಪಾರಂಪಳ್ಳಿ ನರಸಿಂಹ ಐತಾಳ್ ಆಯ್ಕೆಯಾಗಿದ್ದಾರೆ.ಪ್ರಾಥಮಿಕ ಶಾಲೆ ಅಧ್ಯಾಪಕರಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ವೃತ್ತಿ ಬದುಕಿನಲ್ಲಿ, ಜೀವನ ಚರಿತ್ರೆ, ಶಿಶು ಸಾಹಿತ್ಯ, ದಾಸ ಸಾಹಿತ್ಯ ಖಂಡ ಕಾವ್ಯ ಮಹಾಕಾವ್ಯ, ಕಿರುಕಾವ್ಯ, ರಂಗ ಸಾಹಿತ್ಯ, ಯಕ್ಷಗಾನ ಪ್ರಸಂಗ, ಕಥಾ ಸಾಹಿತ್ಯ, ಅನುಭವಕಥನ, ಚುಟುಕು, ಕನ್ನಡದಲ್ಲಿ ಪೂಜಾ ವಿಧಾನಗಳು, ಕಿರು ಕಾದಂಬರಿ, ವೈದಿಕ ಸಾಹಿತ್ಯ, ವಿಜ್ಞಾನ ಸಾಹಿತ್ಯ ಚಿಂತನೆಗಳ ಸಂಕಲನ, ಶ್ರೀ ಮಹಾವಿಷ್ಣು ಸುಪ್ರಭಾತ, ಮೊದಲಾದ ವಿವಿಧ ಪ್ರಕಾರಗಳ ಸಾಹಿತ್ಯ ಸೃಷ್ಟಿಯಿಂದ ಸಾಹಿತ್ಯ ಲೋಕದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿರುವ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ರಂಗಭೂಮಿಯಲ್ಲಿ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿರುವ ತರಬೇತುದಾರರಾಗಿ, ಯಕ್ಷಗಾನ ಕಲಾವಿದರಾಗಿ ಅಪ್ಪಟ ಕನ್ನಡಾಭಿಮಾನಿಯಾಗಿ, ನಾಡು ನುಡಿಗೆ ಬಹುಮುಖ ಸೇವೆ ಸಲ್ಲಿಸಿದ್ದಾರೆ. ಜೂನ್ 11ರಂದು ಪಾರಂಪಳ್ಳಿಯ ಶ್ರೀ ವಿಷ್ಣುಮೂರ್ತಿ ಸಭಾಭವನದಲ್ಲಿ ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸಾಹಿತ್ಯಿಕ ಕ್ಷೇತ್ರಕ್ಕೆ ಮುನ್ನುಡಿ ಬರೆಯಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net