ಅಂದು ಬೆಳಗ್ಗೆ 10.30ಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮ್ಮೇಳನ ಉದ್ಘಾಟಿಸುವರು. ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಪಾರಂಪರಿಕ ವೈದ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಜಿ.ಮಹದೇವಯ್ಯ ಅಧ್ಯಕ್ಷತೆ ವಹಿಸುವರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು. ಮೂರು ದಿನದ ಸಮ್ಮೇಳನದಲ್ಲಿ 6 ಗೋಷ್ಠಿ ಇರಲಿದೆ. ಸಾಂಕ್ರಾಮಿಕ ರೋಗಗಳು ಮತ್ತು ಜ್ವರ, ಸ್ತ್ರೀರೋಗ, ಸಂಧಿವಾತ, ಚರ್ಮರೋಗ, ಪಶುವೈದ್ಯ ಹಾಗೂ ಮಧುಮೇಹ ರೋಗದ ವಿಷಯದ ಬಗ್ಗೆ ಚರ್ಚೆ ಹಾಗೂ ಸಂವಾದ ನಡೆಯಲಿದೆ. ಇದೇ ಸಂದರ್ಭದಲ್ಲಿ ಐವರು ಅನುಭವಿ ಪಾರಂಪರಿಕ ವೈದ್ಯರಿಗೆ ‘ಪಾರಂಪರಿಕ ವೈದ್ಯ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ಪಂಚಲೋಹದ ಧನ್ವಂತರಿ ವಿಗ್ರಹ ಹಾಗೂ 10,000 ರೂ ನಗದನ್ನು ಒಳಗೊಂಡಿದೆ ಎಂದು ವಿವರಿಸಿದರು.