

ಉಡುಪಿ: ಪ್ರವಾಸಿ ತಾಣವಾಗಿ ಅಭಿವೃದ್ಧಿಗೊಂಡಿದ್ದ ಬೈಲೂರು ಪರಶುರಾಮ ಥೀಮ್ ಪಾರ್ಕ್ ರಾಜಕೀಯ ಕಾರಣದಿಂದ ಸಂಪೂರ್ಣ ರ್ನಿಲಕ್ಷ$್ಯಕ್ಕೆ ಒಳಗಾಗಿದ್ದು, ಕಟ್ಟಡಗಳು ನಿರ್ವಹಣೆ ಇಲ್ಲದೆ ಹಾಳಾಗುತ್ತಿವೆ. ಕಾಮಗಾರಿಗಳಿಗೆ ಅನುದಾನವನ್ನು ತಡೆಹಿಡಿಯಲಾಗಿದ್ದು, ಬಾಕಿ ಉಳಿದಿರುವ 4.33 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಬೇಕು ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೈಲೂರು ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಪ್ರಾರಂಭಕ್ಕೆ ಆಗ್ರಹಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. 2023ರಲ್ಲಿ ಪರಶುರಾಮ ಮೂರ್ತಿಯ ಮರುವಿನ್ಯಾಸಕ್ಕಾಗಿ ಶಿಲ್ಪಿ ನಿರ್ಮಿತಿ ಕೇಂದ್ರಕ್ಕೆ ಮನವಿ ಮಾಡಿದ್ದು, ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದ್ದರು. ನಂತರ ಉದಯ್ ಶೆಟ್ಟಿ ಮತ್ತು ಬೆಣಬಲಿಗರು ಬಾಕಿ ಕಾಮಗಾರಿಗಳನ್ನು ನಡೆಸಲು ಬಿಡದೆ ಮೂರ್ತಿ ನೈಜತೆ ಬಗ್ಗೆ ಗೊಂದಲ ಉಂಟುಮಾಡಿ ತಡೆಯೊಡ್ಡಿದ್ದಾರೆ. ಪ್ರಸ್ತುತ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದು, ಮೂರ್ತಿ ೈಬರ್ನದ್ದು ಅಲ್ಲ. ಹಿತ್ತಾಳೆಯದ್ದು ಎಂಬುದಾಗಿ ವರದಿ ನೀಡಿದ್ದಾರೆ. ಸುಳ್ಳುಗಳ ಮೆರವಣಿಗೆ ನಿಂತು ಹೋಗಿದ್ದು, ಸತ್ಯದ ವಿಜಯೋತ್ಸವ ನಡೆದಿದೆ. ಕಾರ್ಕಳದ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಹಳ್ಳ ಹಿಡಿಸುವ ಪ್ರಯತ್ನ ನಿರಂತರ ನಡೆಯುತ್ತಿದೆ ಎಂದರು.
ಮೊದಲ ಕೇಸ್ ದಾಖಲು
ಕಾಮಗಾರಿಗೆ ತಡೆಕೋರಿ ಕೋರ್ಟ್ಗೆ ಹೋದವರೆ ಇಂದು ಮೂರ್ತಿ ಸ್ಥಾಪನೆ ಮಾಡಬೇಕು ಎಂಬುದಾಗಿ ಪಿಐಎಲ್ ಹಾಕಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಪಾಳುಬೀಳು ಕಾಂಗ್ರೆಸ್ ನೇರ ಕಾರಣವಾಗಿದೆ. ಈ ಬಾರಿ ಅಧಿವೇಶನದಲ್ಲಿ ಸರ್ಕಾರ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕ್ಕೆ ಕಾನೂನು ತರುತ್ತಿದೆ. ಮೊದಲ ಕೇಸ್ ಉದಯ್ ಶೆಟ್ಟಿ ಅವರ ವಿರುದ್ಧ ದಾಖಲಿಸಬಹುದು ಎಂದು ಹೇಳಿದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯ್ಕ, ಮಹಿಳಾ ಮೋರ್ಚಾ ಅಧ್ಯೆ ಸಂಧ್ಯಾ ರಮೇಶ್, ಪ್ರಮುಖರಾದ ಮುಟ್ಲುಪಾಡಿ ಸತೀಶ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಮಹಾವೀರ ಜೈನ್, ಸುಮಿತ್ ಶೆಟ್ಟಿ, ರಾಕೇಶ್ ಶೆಟ್ಟಿ ಸಚ್ಚಿದಾನಂದ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಕಳದಿಂದ ಮಣಿಪಾಲ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ವಾಹನ ಜಾಥಾ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.