ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ

P PURA ANJANEEYAA 15. (2)
Published on

ಪರಶುರಾಮಪುರ: ಸಮೀಪದ ಕಡೇಹುಡೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಕುಂಭಾಭಿಷೇಕ, ಪಂಚಾಮೃತಾಭಿಷೇಕ ನೆರವೇರಿದವು.

ದೇಗುಲ ಹಾಗೂ ಗ್ರಾಮದ ಮುಖ್ಯ ರಸ್ತೆಗಳಲ್ಲಿ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಡೋಲು, ನಂದಿಕೋಲು ಕುಣಿತ ಮತ್ತಿತರೆ ಜನಪದ ವಾದ್ಯಗಳ ಮೂಲಕ ದೇವರ ಮೆರವಣಿಗೆ ಮಾಡಲಾಯಿತು. ಗ್ರಾಮ ಸೇರಿ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಭಕ್ತರು ಹರಕೆ ಸಲ್ಲಿಸಿ ದೇವರ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net