

ಪರಶುರಾಮಪುರ: ಕರೊನಾ ವೈರಸ್ ತಡೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ಪಡೆದುಕೊಳ್ಳಬೇಕು ಎಂದು ಪರಶುರಾಮಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ತಿಳಿಸಿದರು.
ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆ ವೇಳೆ ಮಾತನಾಡಿ, ಅಂಗವಿಕಲರು, ವೃದ್ಧರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಗ್ರಾಪಂ ಅಧ್ಯಕ್ಷ ಎಂ.ಆರ್.ರುದ್ರೇಶ, ಉಪಾಧ್ಯಕ್ಷೆ ಎನ್.ದೀಪಾ, ಮಂಜುನಾಥ, ತಿಪ್ಪೇಸ್ವಾಮಿ, ಗ್ರಾಮಸ್ಥರಾದ ಕಂಪಮ್ಮ, ಸುಶೀಲಮ್ಮ, ಕರಿಯಣ್ಣ, ಬೊಮ್ಮಕ್ಕ, ತಿಮ್ಮಣ್ಣ, ನಾಗರಾಜು, ಲಕ್ಷ್ಮೀದೇವಿ ಇದ್ದರು.