ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಸೌಕರ್ಯ

P PURA PAREEKSHE 24P1
Published on

ಪರಶುರಾಮಪುರ: ಹೋಬಳಿಯ ಎಲ್ಲ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಕರ್ಯಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಕಲ್ಪಿಸಿಕೊಟ್ಟಿದೆ ಎಂದು ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ತಿಳಿಸಿದರು.

ಹೊಬಳಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಪೊಲೀಸ್ ಠಾಣೆಯ ಪಿಎಸ್‌ಐ ಮಹೇಶ್ ಹೊಸಪೇಟೆ ಮಾತನಾಡಿ, ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಅಗತ್ಯವಿರುವ ಕಡೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಪೊಲೀಸ್, ಗೃಹರಕ್ಷಕರನ್ನು ನಿಯೋಜಿಸಲಾಗಿದೆ ಎಂದರು.

ಗ್ರಾಪಂ ಅಧ್ಯಕ್ಷರಾದ ಎಂ ಆರ್ ರುದ್ರೇಶ, ಓ ಬೈಲಪ್ಪ, ಬಿಇಒ ಕೆ ಎಸ್ ಸುರೇಶ, ಪಿಎಸ್‌ಐ ಮಹೇಶಹೊಸಪೇಟ, ಎಎಸ್‌ಐ ರೇವಣಸಿದ್ದೇಶ್ವರ, ನಜೀರ್, ಮುಖ್ಯಶಿಕ್ಷಕರಾದ ರಾಮಾಂಜಿನೇಯ, ಕರಿಬಸವಶಾಸ್ತ್ರಿ, ತುಂಗಭದ್ರಪ್ಪ, ಶಿವಾನಂದ, ಚನ್ನಕೇಶವ, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net