ವಿದ್ಯಾರ್ಥಿಗಳಲ್ಲಿ ಇರಲಿ ಪರಿಸರ ಕಾಳಜಿ

P PURA HASIRU 28P1 (2)
Published on

ಪರಶುರಾಮಪುರ: ಪರಿಸರ ಸಂರಕ್ಷಣೆ, ಕಾಳಜಿ ವಿದ್ಯಾರ್ಥಿಗಳಿಗೆ ಅತ್ಯಗತ್ಯ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕ ನಾಗರಾಜು ತಿಳಿಸಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೆಪಿಎಸ್, ಶಾಲಾ ಸಮಿತಿಯಿಂದ ಗ್ರಾಮದ ಸರ್ಕಾರಿ ಬಾಲಕಿಯರ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಚಿಗುರು ಇಕೋ ಕ್ಲಬ್ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.

ಕಾಂಕ್ರಿಟ್ ಯುಗದಲ್ಲಿ ಪರಿಸರ ಮರೆಯಾಗುತ್ತಿದೆ. ಇದನ್ನು ಸಂರಕ್ಷಣೆ ಮಾಡದೇ ಹೋದರೆ ಬದುಕು ಸಂಕಷ್ಟಕ್ಕೆ ಸಿಲುಕುತ್ತದೆ. ಹೀಗಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸಬೇಕಿದೆ ಎಂದರು.

ಕೆಪಿಎಸ್ ಉಪ ಪ್ರಾಚಾರ್ಯ ತುಂಗಭದ್ರಪ್ಪ ಮಾತನಾಡಿ, ವೈಜ್ಞಾನಿಕವಾಗಿ ನಾವೆಷ್ಟೇ ಮುಂದುವರಿದಿದ್ದರೂ ಜೀವಿಸಲು ಗಾಳಿ, ನೀರು ಅತ್ಯಗತ್ಯ. ಇವುಗಳ ಉಳಿವಿಗೆ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.

ಶಿಕ್ಷಕ ನಾಗಗೊಂಡನಹಳ್ಳಿ ನಾಗರಾಜು, ಪವಾಡಗಳ ಗುಟ್ಟು ಬಯಲು ಕಾರ್ಯಕ್ರಮ ನಡೆಸಿಕೊಟ್ಟರು.

ಮುಖ್ಯಶಿಕ್ಷಕರಾದ ಮೂಡಲಗಿರಿಯಪ್ಪ, ಟಿ.ಚಂದ್ರಣ್ಣ, ಶಿಕ್ಷಕರಾದ ಲತಾ, ರಂಗಸ್ವಾಮಿ, ಪುಷ್ಪಾವತಿ, ಮಂಜುನಾಥ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net