ಕಾಮಗಾರಿ ಪರಿಶೀಲಿಸಿದ ಅಧಿಕಾರಿಗಳು

P PURA VARADI 1 3 (2)
Published on

ಪರಶುರಾಮಪುರ: ಸಮೀಪದ ಸೂರನಹಳ್ಳಿಗೇಟ್ ಸಮೀಪ ನಡೆಯುತ್ತಿರುವ ಪಾವಗಡ-ಚಿತ್ರದುರ್ಗ ರಸ್ತೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಈಚೆಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಿದರು.

ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುತ್ತಿಲ್ಲ ಎಂದು ಸ್ಥಳೀಯರು ದೂರಿದ್ದರು. ಈ ಕುರಿತು ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲೋಕೋಪಯೋಗಿ ಇಲಾಖೆ ಅಧಿಕಾರಿ ರಾಜಣ್ಣ ಮಾತನಾಡಿ, ಚಿತ್ರದುರ್ಗ-ಪಾವಗಡ ಮುಖ್ಯ ರಸ್ತೆಯ ಮೊದಲ ಹಂತದ ಅಭಿವೃದ್ಧಿ ಕಾರ್ಯ ಮುಗಿದಿದ್ದು, ಮತ್ತೊಂದು ಹಂತದ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಕಾಮಗಾರಿಯಲ್ಲಿ ಕಳಪೆಯಾಗದಂತೆ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ಎಇಇ ಎಚ್.ನಾಗರಾಜ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net