ಅರ್ಹರಿಗೆ ಸೌಲಭ್ಯ ತಲುಪಿಸಿ

P PURA MLA 27 P3 (1)
Published on

ಪರಶುರಾಮಪುರ: ಸಂವಿಧಾನದ ಆಶಯದಂತೆ ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.

ಸಮೀಪದ ದೊಡ್ಡಚೆಲ್ಲೂರು ಗ್ರಾಮದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಗ್ರಾಮಾಭಿವೃದ್ಧಿ ಕುರಿತ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಶುರಾಮಪುರ ಹೋಬಳಿ ವ್ಯಾಪ್ತಿಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯ ಅಭಿವೃದ್ಧಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷ ಎಲ್.ಸುರೇಶ, ಉಪಾಧ್ಯಕ್ಷೆ ಸಾಕಮ್ಮ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಚನ್ನಕೇಶವ, ಜಿಪಂ ನಾಮನಿರ್ದೇಶಿತ ಸದಸ್ಯ ಜಯವೀರಾಚಾರಿ, ಗ್ರಾಪಂ ಸದಸ್ಯರಾದ ನಾಗರಾಜು, ತಿಮ್ಮಣ್ಣ, ಮಾಜಿ ಸದಸ್ಯ ರಾಮೇಗೌಡ, ಪಿಡಿಒ ಕೆಂಚಲಿಂಗಪ್ಪ, ಭೂತರಾಜು, ಆರ್‌ಐ ಹಿರಿಯಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net