ನಾಳೆ ದಸಂಸ ಶಾಖೆ ಉದ್ಘಾಟನೆ

SHADAKSHARA SWAMIJI
Published on

ಪರಶುರಾಮಪುರ: ತಾಲೂಕಿನ ಎನ್.ದೇವರಹಳ್ಳಿ ಗ್ರಾಮದಲ್ಲಿ ಮಾ.9ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿದೆ.

ಮಾದಿಗ ಆದಿಜಾಂಭವ ಮಠದ ಶ್ರೀ ಷಡಕ್ಷರ ಮುನಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಮಿತಿ ತಾಲೂಕು ಸಂಚಾಲಕ ಟಿ.ವಿಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಸಚಿವ ಬಿ.ಶ್ರೀರಾಮುಲು ಉದ್ಘಾಟಿಸುವರು.

ದಸಂಸ ಹಿರಿಯ ಮುಖಂಡ ಎಂ.ಜಯಣ್ಣ, ಸಂಸದ ಎ.ನಾರಾಯಣಸ್ವಾಮಿ ಇತರರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net