ಸ್ಪರ್ಧಾತ್ಮಕ ಮನೋಭಾವಕ್ಕೆ ಪೂರಕ

P PURA SHAALE 22 (1)
Published on

ಪರಶುರಾಮಪುರ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ರಸಪ್ರಶ್ನೆ ಸ್ಪರ್ಧೆ ಸಹಕಾರಿ ಎಂದು ಪ್ರಭಾರ ಮುಖ್ಯಶಿಕ್ಷಕ ಎ.ವೀರಣ್ಣ ಹೇಳಿದರು.

ಸಮೀಪದ ಪಿ.ಮಹದೇವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ದುರ್ಗ-ಪಿ ಮಹದೇವಪುರ ಪ್ರೌಢಶಾಲೆ, ಶಿಕ್ಷಣ ಇಲಾಖೆ ಹಾಗೂ ಐಚ್ಛಿಕ ವಿಷಯಗಳ ಶಿಕ್ಷಕರ ಸಂಘದಿಂದ ಆಯೋಜಿಸಿದ್ದ ಐಚ್ಛಿಕ ವಿಷಯಗಳ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ಪರ್ಧೆ ಮತ್ತು ಪರೀಕ್ಷಾ ದೃಷ್ಟಿಯಿಂದ ವಿದ್ಯಾರ್ಥಿಗಳು ಗಮನವಿಟ್ಟು ಕಲಿಯಬೇಕು ಎಂದು ಕಿವಿಮಾತು ಹೇಳಿದರು. ಶಿಕ್ಷಕಿಯರಾದ ಕೆಂಚವೀರಮ್ಮ, ಮಂಜುಳಾ ರಸಪ್ರಶ್ನೆ ಸ್ಪರ್ಧೆ ನಡೆಸಿಕೊಟ್ಟರು. ಶಿಕ್ಷಕರಾದ ಕೇಶವಮೂರ್ತಿ, ಶ್ರೀನಿವಾಸ, ರವೀಂದ್ರರೆಡ್ಡಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net