ದುರುಗಮ್ಮ ದೇವಿ ವಿಗ್ರಹ ಪ್ರತಿಷ್ಠಾಪನೆ

P PURA DURUGAMMAA 1 (1)
Published on

ಪರಶುರಾಮಪುರ: ಗ್ರಾಮದ ಎಸ್ಸಿ ಕಾಲನಿಯಲ್ಲಿ ದುರುಗಮ್ಮ ದೇವಿ ನೂತನ ವಿಗ್ರಹ, ಕಳಸ ಪ್ರತಿಷ್ಠಾಪನೆ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ಗಂಗಾಪೂಜೆ ಬಳಿಕ ಅಭಿಷೇಕ ಮತ್ತಿತರ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಯಿತು. ವಾಲಗ, ಕಹಳೆ, ತಮಟೆ ಮತ್ತಿತರ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ಮೂರ್ತಿ ಮೆರವಣಿಗೆ ಮಾಡಲಾಯಿತು.

ವಿವಿಧೆಡೆಯಿಂದ ಆಗಮಿಸಿದ್ದ ಗುಡಿಕಟ್ಟೆಯ ಅಣ್ಣ-ತಮ್ಮಂದಿರು ದೇವಿಗೆ ಧೂಪ, ದೀಪ, ಹಣ್ಣು, ಕಾಯಿ, ಕರ್ಪೂರ ಅರ್ಪಿಸಿ ಭಕ್ತಿ ಮೆರೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net