

ಕೋಟ: ಇಲ್ಲಿನ ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ವಿಜಯದಶಮಿ ಪ್ರಯುಕ್ತ ಶನಿವಾರ ವಿಶೇಷ ಕಾರ್ಯಕ್ರಮಗಳು ನೆರವೇರಿದವು.
ಚಂದ್ರಶೇಖರ್ ಮಯ್ಯ ಸಾರಥ್ಯದಲ್ಲಿ ನಡೆದ ಚಂಡಿಕಾ ಸಪ್ತಶತಿ ಪಾರಾಯಣ, ದುರ್ಗಾಹೋಮದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಸಿ.ಕುಂದರ್ ಕುಟುಂಬಸ್ಥರು ಭಾಗಿಯಾದರು. ಸಿಂಹವಾಹಿನಿ ರೂಪದಲ್ಲಿ ದೇವಿಯನ್ನು ಪುಷ್ಪಾಲಂಕೃತಗೊಳಿಸಲಾಗಿತ್ತು. ವ್ಯವಸ್ಥಾಪನಾ ಸಮಿತಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿ, ಮಾಜಿ ಟ್ರಸ್ಟಿ ಸದಸ್ಯರು, ವ್ಯವಸ್ಥಾಪಕರು, ಸಿಬ್ಬಂದಿ ಉಪಸ್ಥಿತರಿದ್ದರು.