ಬಾಲ್ಯದಿಂದಲೇ ಮಕ್ಕಳನ್ನು ತಿದ್ದುವ ಕಾರ್ಯ

meeting-1
Published on

ಕುಂದಾಪುರ: ನಮ್ಮ ಮಕ್ಕಳೇ ನಮ್ಮ ಅಮೂಲ್ಯ ಆಸ್ತಿ. ನಮ್ಮನ್ನು ಬಿಂಬಿಸುವ ಅವರನ್ನು ಬಾಲ್ಯದಿಂದಲೇ ತಿದ್ದುತ್ತಾ ಸನ್ಮಾರ್ಗದಲ್ಲಿ ನಡೆಸುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಉಡುಪಿ ಡಾ.ಎ.ವಿ.ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಆಪ್ತ ಸಮಾಲೋಚಕಿ ವಿದ್ಯಾಶ್ರೀ ನಾಗರಾಜ್ ಹೇಳಿದರು.

ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಕುಂದಾಪುರ ವತಿಯಿಂದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ವಿಭಾಗದ 2024-25ನೇ ಸಾಲಿನ ರಕ್ಷಕ -ಶಿಕ್ಷಕ ಸಭೆ ಶಾಲೆ ಸಭಾಂಗಣದಲ್ಲಿ ಶನಿವಾರ ಮಾತನಾಡಿದರು.

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಪ್ರೌಢ ವಿಭಾಗ ಮುಖ್ಯಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜ ಉಪಸ್ಥಿತರಿದ್ದರು. ಪೂರ್ವ ಪ್ರಾಥಮಿಕ ವಿಭಾಗ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಸ್ವಾಗತಿಸಿ, ಶಿಕ್ಷಕಿಯರಾದ ಪದ್ಮಾ ವಂದಿಸಿದರು. ರೂಪಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net