ಪಾಲಕರು ಮಕ್ಕಳ ಆರೋಗ್ಯದತ್ತ ಕಾಳಜಿವಹಿಸಿ

PARENTS WANT TO CARE CHILDREN HEALTH
POSHAN ABHIYANA PARENTS CHILDRENS HEALTH
ಕೊಪ್ಪಳ ತಾಲೂಕಿನ ಓಜನಳ್ಳಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಹಿರಿಯ ಆರೋಗ್ಯ ಸಹಾಯಕ ವಿ.ಗೋವಿಂದಪ್ಪ, ಕಿರಿಯ ಆರೋಗ್ಯ ಸಹಾಯಕಿ ಎಸ್.ಇ.ಮಹೇಂದ್ರಕರ್, ಅಂಗನವಾಡಿ ಕಾರ್ಯಕರ್ತೆಯರಾದ ರೇಖಾ, ರತ್ನಾ, ಮೊಹಿದ್ದೀನ್ ಬಿ ಇದ್ದರು.
Published on

ಕೊಪ್ಪಳ: ಮಕ್ಕಳ ಆರೋಗ್ಯದ ಬಗ್ಗೆ ಪಾಲಕರು ಹೆಚ್ಚಿನ ಕಾಳಜಿವಹಿಸುವಂತೆ ಹಿರಿಯ ಆರೋಗ್ಯ ಸಹಾಯಕ ವಿ.ಗೋವಿಂದಪ್ಪ ತಿಳಿಸಿದರು.

ತಾಲೂಕಿನ ಓಜನಳ್ಳಿ ಗ್ರಾಮದಲ್ಲಿ ಭಾಗ್ಯನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳ ಆರೋಗ್ಯ ವೃದ್ಧಿಗಾಗಿ ಯೋಜನೆ ರೂಪಿಸಲಾಗಿದೆ. ಅಂಗನವಾಡಿಗಳಲ್ಲಿ ನೀಡುವ ಪೌಷ್ಠಿಕ ಆಹಾರವನ್ನು ಕಡ್ಡಾಯವಾಗಿ ಮಕ್ಕಳಿಗೆ ತಿನ್ನಿಸಬೇಕು. ನೀವು ತಿನ್ನುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ.

ಇದರಿಂದ ಮಕ್ಕಳಲ್ಲಿ ಆಗಬಹುದಾದ ಅಪೌಷ್ಟಿಕತೆ ತಡೆಯಲು ಸಹಕಾರಿಯಾಗಲಿದೆ. ಪಾಲಕರು ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷೃವಹಿಸಬಾರದು ಎಂದು ಮನವಿ ಮಾಡಿದರು.
ಕಿರಿಯ ಆರೋಗ್ಯ ಸಹಾಯಕಿ ಎಸ್.ಇ.ಮಹೇಂದ್ರಕರ್ ಮಾತನಾಡಿದರು. ಮೂರು ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯ ಗರ್ಭಿಣಿಯರಿಗೆ ಸೀಮಂತ ಮಾಡಲಾಯಿತು.

ಮಕ್ಕಳಿಗೆ ಪೌಷ್ಟಿಕ ಆಹಾರ ತಿನ್ನಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳು ವಿವಿಧ ವೇಷ-ಭೂಷಣ ಪ್ರದರ್ಶಿಸಿದರು. ಆರೋಗ್ಯ ಇಲಾಖೆ ಪ್ರತಿನಿಧಿ ಹನುಮಕ್ಕ, ಅಂಗನವಾಡಿ ಕಾರ್ಯಕರ್ತೆಯರಾದ ರೇಖಾ, ರತ್ನಾ, ಮೊಹಿದ್ದೀನ್ ಬಿ, ಆಶಾ ಕಾರ್ಯಕರ್ತೆಯರು, ತಾಯಂದಿರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net