ಪಾಲಕರ ಕನಸು ನನಸಾಗಿಸಿ

10 hdlp 02
ಹೂವಿನಹಡಗಲಿ ಶ್ರೀಮತಿ ರುದ್ರಾಂಬ ಎಂ.ಪಿ.ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಶಾಸಕ ಕೃಷ್ಣನಾಯ್ಕ ಉದ್ಘಾಟಿಸಿದರು. ರಂಗಭಾರತಿ ಕಾರ್ಯಾಧ್ಯಕ್ಷೆ ಎಂ.ಪಿ.ಸುಮಾ ವಿಜಯ್, ಪ್ರಾಚಾರ್ಯ ಎಂ.ವಿಜಯಕುಮಾರ್, ಪುರಸಭೆ ಅಧ್ಯಕ್ಷೆ ಗಂಟಿ ಜಮಾಲ್‌ಬಿ ಇತರರಿದ್ದರು.
Published on

ಹೂವಿನಹಡಗಲಿ: ಖಾಸಗಿ ಕಾಲೇಜುಗಳಿಗೆ ಹೆಚ್ಚು ಹಣ ನೀಡಿ ಶಿಕ್ಷಣ ಪಡೆಯಬೇಕಾಗಿರುವ ಸಂದರ್ಭದಲ್ಲಿ ತಾಲೂಕಿನಲ್ಲಿ ಸುಸಜ್ಜಿತ ಸರ್ಕಾರಿ ಪದವಿ ಕಾಲೇಜು ನಿರ್ಮಾಣವಾಗಿದ್ದು, ಈ ಕಾಲೇಜು ಅವಲಂಬಿಸಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಅಧ್ಯಾಪಕರು ಶ್ರಮಿಸಬೇಕು ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.

ಪಟ್ಟಣದ ಶ್ರೀಮತಿ ರುದ್ರಾಂಬ ಎಂ.ಪಿ.ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಕಾಲೇಜಿನ ಪಠ್ಯೇತರ ಚಟುವಟಿಕೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಅನುದಾನದ ಕೊರತೆಯ ಮಧ್ಯೆ ನಮ್ಮ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕಾಲೇಜಿಗೆ ಹೈಟೆಕ್ ಸ್ಪರ್ಶ ನೀಡಿ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು, ವಿದ್ಯಾರ್ಥಿಗಳು ಪಾಲಕರ ಕನಸನ್ನು ನನಸು ಮಾಡಲು ಕಠಿಣ ಪರಿಶ್ರಮ ಪಡುವ ಮೂಲಕ ಉನ್ನತ ಹುದ್ದೆ ಪಡೆಯಬೇಕು. ಕಾಲೇಜಿನಲ್ಲಿರುವ ಅಧ್ಯಾಪಕರು ಕುಂಟುನೆಪಗಳನ್ನು ಹೇಳದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.

ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ರಂಗಭಾರತಿ ಕಾರ್ಯಾಧ್ಯಕ್ಷೆ ಎಂ.ಪಿ.ಸುಮಾ ವಿಜಯ್, ನಿವೃತ್ತ ಪ್ರಾಚಾರ್ಯ ಅಬ್ದುಲ್ ಮುತಾಲಿಬ್, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಜೈನ್, ಸಿಡಿಎಂಸಿ ಸದಸ್ಯರಾದ ರಮೇಶ, ನಸ್ರೀನ್, ಟಿ.ಮಹಾಂತೇಶ, ಆರ್.ಪಕ್ಕೀರಪ್ಪ, ಕೆ.ಅಯ್ಯನಗೌಡ, ಅಂಗನವಾಡಿ ಫೆಡರೇಷನ್ ತಾಲೂಕು ಅಧ್ಯಕ್ಷೆ ಬಿ.ಜಯಲಕ್ಷ್ಮೀ, ಪ್ರಾಧ್ಯಾಪಕರಾದ ಡಾ.ಸತೀಶ್ ಪಾಟೀಲ, ಡಾ.ಸುರೇಶ್ ಬೂದನೂರು, ಭೀಮಣ್ಣ, ಉಮಾದೇವಿ, ಪ್ರಮುಖ ಗೌಸ್‌ಮೋಹಿದ್ದೀನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net