

ಹೆಬ್ರಿ: ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಲ್ಲಿ ಅನೇಕ ವಿದ್ಯಾರ್ಥಿಗಳು ಗೊಂದಲಗಳಿಗೆ ಒಳಗಾಗುತ್ತಿದ್ದು, ಪಾಲಕರು ಮುಕ್ತವಾಗಿ ತಮ್ಮ ಮಕ್ಕಳೊಂದಿಗೆ ಮಾತನಾಡಿ ಮಾರ್ಗದರ್ಶನ ಮಾಡಬೇಕು ಎಂದು ಎ.ವಿ.ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಮನಃಶಾಸ್ತ್ರಜ್ಞ ನಾಗರಾಜ ಮೂರ್ತಿ ಹೇಳಿದರು.
ಹಿರಿಯಡಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಉಡುಪಿ ಯುವಸ್ಪಂದನ ಸಂಸ್ಥೆಯ ಸಮಾಲೋಚಕಿ ಭೀಮವ್ವ ವಕ್ರ ಮಾತನಾಡಿದರು.
ನೂತನ ಶಿಕ್ಷಕ ರಕ್ಷಕ ಸಂಘ ರಚಿಸಿದ್ದು, ಅಧ್ಯಕ್ಷೆಯಾಗಿ ಶಾಂತಾ ಪೆರ್ಡೂರು ಆಯ್ಕೆಯಾದರು. ಕಾರ್ಯದರ್ಶಿ ಪ್ರಕಾಶ್ ಶೆಟ್ಟಿಗಾರ್ ಶಿವಪುರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗಾಯತ್ರಿ, ಶ್ರೀಮತಿ ಆಚಾರ್ಯ, ವಿಠ್ಠಲ ನಾಯ್ಕ, ಭಾಸ್ಕರ ಆಚಾರ್ಯ, ಗೋಪಾಲ ಸುರೇಖಾ ಬಂಗೇರ ಆಯ್ಕೆಗೊಂಡರು.
ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕ ಡಾ.ಲಿತಿನ್ ಬಿ.ಎಂ. ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಸಂಚಾಲಕಿ ಡಾ.ಸೌಮ್ಯಲತಾ ಪಿ. ಸ್ವಾಗತಿಸಿದರು. ಶಿಕ್ಷಕ-ರಕ್ಷಕ ಸಂಘದ ಸಂಚಾಲಕಿ ಮೀನಾಕ್ಷಿ ನಾಯ್ಕ ವಂದಿಸಿದರು. ಉಪನ್ಯಾಸಕ ರವಿಚಂದ್ರ ಬಾಯರಿ ಕೆ. ನಿರೂಪಿಸಿದರು.