

ಮೂಡುಬಿದಿರೆ: ಗುಣಮಟ್ಟದ ಶಿಕ್ಷಣದ ಅಗತ್ಯತೆ, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರ ಸಂಬಂಧ ಸೌಹಾರ್ದಯುತವಾಗಿದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮೂಡುಬಿದಿರೆ ಜೈನ ಪ್ರೌಢಶಾಲೆ ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ ಹೇಳಿದರು.
ಶತಮಾನೋತ್ಸವ ಸಂಭ್ರಮದಲ್ಲಿರುವ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಶಿಶುಮಂದಿರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಾಲಕರ ಸಭೆಯಲ್ಲಿ ಮಾತನಾಡಿದರು.
ಸಂಚಾಲಕ ಶಾಂತರಾಮ ಕುಡ್ವ ಅಧ್ಯಕ್ಷತೆ ವಹಿಸಿದ್ದರು. ಸೇವಾಂಜಲಿ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ರಾಜೇಶ ಬಂಗೇರ ಶತಮಾನೋತ್ಸವ ವರ್ಷದಲ್ಲಿ ಹಮ್ಮಿಕೊಂಡ ಯೋಜನೆಗಳು, ಶಾಲೆಯ ಪ್ರಗತಿಗೆ ಕೈಗೊಂಡ ಕಾರ್ಯಗಳು, ಆಯೋಜಿಸುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಮುಖ್ಯಶಿಕ್ಷಕ ವತ್ಸಲಾ ರಾಜೇಶ್ ಪ್ರಸ್ತಾವನೆಗೈದರು. ಶಶಿಕಲಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.