

ವಿಜಯವಾಣಿ ಸುದ್ದಿಜಾಲ ಕಿನ್ನಿಗೋಳಿ
ಬಡಗ ಎಕ್ಕಾರು ಸರ್ಕಾರಿ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಾಮಾಜಿಕ ಲೆಕ್ಕ ಪರಿಶೋಧನಾ ಇಲಾಖೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಕ್ಷಿಣ ಕನ್ನಡ ಜಿಪಂ ಸಹಯೋಗದಲ್ಲಿ ಸಮಗ್ರ ಶಿಕ್ಷಣ ಯೋಜನೆಯ ಸಾಮಾಜಿಕ ಪರಿಶೋಧನೆ ಅಂಗವಾಗಿ ಪಾಲಕರ ಸಭೆ ನಡೆಯಿತು.
ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಧನಲಕ್ಷ್ಮೀ ಅವರು, ನಿರಂತರವಾಗಿ ಶಾಲೆ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಶಿಕ್ಷಕ ವೃಂದ, ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ಶಾಲೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮ, ಶಾಲೆಗೆ ಲಭಿಸಿದ ಅನುದಾನಗಳ ಬಳಕೆ, ವಿದ್ಯಾರ್ಥಿಗಳು, ಶಿಕ್ಷಕರು, ಮುಖ್ಯಶಿಕ್ಷಕರಿಂದ ವಿಸ್ತಾರವಾದ ಮಾಹಿತಿ ಸಂಗ್ರಹಿಸಿ ಸಮಗ್ರ ಶಿಕ್ಷಣದ ಸಾಮಾಜಿಕ ಪರಿಶೋಧನೆ ವರದಿ ಮಂಡಿಸಿದರು.
ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುದೀಪ್ ಅಮೀನ್, ತಾಪಂ ಅಧಿಕಾರಿ ನಿಶ್ಮಿತಾ, ಎಕ್ಕಾರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಶೆಟ್ಟಿ, ಸುರೇಶ್, ಮೆಲ್ವಿನ್, ಬಬಿತಾ, ಮುಖ್ಯ ಶಿಕ್ಷಕರಾದ ಇಂದಿರಾ ರಾವ್, ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು. ಜ್ಯೋತಿ ವಂದಿಸಿದರು. ಚಿತ್ರಶ್ರೀ ನಿರೂಪಿಸಿದರು.